Belagavi News In Kannada | News Belgaum

ಕೋರ್ಟಿನ ಆವರಣದಲ್ಲೇ ಮಹಿಳೆ ಮೇಲೆ ಗುಂಡಿನ ದಾಳಿ

ನವದೆಹಲಿ: ದೆಹಲಿಯ ನ್ಯಾಯಾಲಯದ ಆವರಣದೊಳಗೆ ನಡೆದ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಸಾಕೇತ್ ಜಿಲ್ಲಾ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ಹಣಕಾಸಿನ ವಿವಾದಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗೆ ನ್ಯಾಯಾಲಯಕ್ಕೆ ಮಹಿಳೆ ಹಾಜರಾಗಿದ್ದಳು. ಈ ವೇಳೆ ವಕೀಲರ ವೇಷದಲ್ಲಿದ್ದ ವ್ಯಕ್ತಿಯೊಬ್ಬ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಅಲ್ಲಿದ್ದ ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಘಟನೆಗೆ ಸಂಬಂಧಿಸಿ 4 ಸುತ್ತಿನ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ./////