ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 70 ಲಕ್ಷ ವಶಕ್ಕೆ ಪಡೆದ ಕಾಗವಾಡ ಪೊಲೀಸರು

ಬೆಳಗಾವಿ: ಕಾಗವಾಡ-ಮಿರಜ್ ರಸ್ತೆ ಚೆಕ್ ಪೋಸ್ಟ್ ನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 70 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ವಿಶೇಷವಾಗಿ ಅಂತಾರಾಜ್ಯ ಗಡಿಯಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಮತದಾರರಿಗೆ ಹಂಚುವ ಅಕ್ರಮ ಹಣ, ಮದ್ಯ, ಸಾಮಗ್ರಿಗಳ ಸಾಗಾಟದ ಮೇಲೆ ತೀವ್ರ ನಿಗಾ ವಹಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಅದೇ ರೀತಿ ಎಸ್ಎಲ್ಬಿಸಿ ನಿಯಮಾವಳಿಗಳನ್ನು ಪಾಲಿಸದೆ ಸಾಗಿಸುತ್ತಿದ್ದ 70 ಲಕ್ಷ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ಕಾಗವಾಡ ಚೆಕ್ಪೋಸ್ಟ್ನಲ್ಲಿ ವಶಪಡಿಸಿಕೊಂಡಿದ್ದಾರೆ.//////