Belagavi News In Kannada | News Belgaum

ಜೆಡಿಎಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಭರವಸೆಗಳ ಮಹಾಪೂರ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ 12 ದಿನಗಳು ಮಾತ್ರ ಬಾಕಿ ಉಳಿದಿದ್ದು, ಜೆಡಿಎಸ್‌ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಚುನಾವಣಾ ದೃಷ್ಟಿಯಿಂದ ಹಲವು ಭರಪೂರ ಯೋಜನೆಗಳನ್ನು ಪಕ್ಷದ ವರಿಷ್ಠರು ಘೋಷಣೆ ಮಾಡಿದ್ದಾರೆ. ಮುಸ್ಲಿಮರಿಗೆ ಮತ್ತೆ ಶೇ.4ರಷ್ಟು ಮೀಸಲಾತಿಯನ್ನು ನೀಡುತ್ತೇವೆ ಎಂಬ ಭರವಸೆಯನ್ನು ನೀಡಿದ್ದು, ರೈತರ ಮಕ್ಕಳನ್ನು ಮದುವೆಯಾಗುವವರಿಗೆ 2 ಲಕ್ಷ ರೂ. ನೀಡುತ್ತೇವೆ ಎಂದು ಹೇಳಿದ್ದಾರೆ.
ಒಟ್ಟು 9 ವಿಭಾಗಗಳಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಜೆಡಿಎಸ್‌ ಬಿಡುಗಡೆ ಮಾಡಿದ್ದು, ಸಾಮಾಜಿಕ ಭದ್ರತೆಗಳು, ಪಂಚರತ್ನ ಯೋಜನೆ, ಕೈಗಾರಿಕಾ ಅಭಿವೃದ್ಧಿ, ಸಾರಿಗೆ ಮತ್ತು ಪ್ರವಾಸೋದ್ಯಮ, ಜಲಧಾರೆ, ರಸ್ತೆ ಅಭಿವೃದ್ಧಿ-ಸಂಪರ್ಕ ಸೇತುವೆಗಳು, ಇಂಧನ ವಲಯ, ಆಡಳಿತ ಸುಧಾರಣೆ, ಕೃಷಿ ಮತ್ತು ಹೈನುಗಾರಿಕೆಯ ವಿಭಾಗದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ.

ಜೆಡಿಎಸ್‌ ಪ್ರಣಾಳಿಕೆಯ ಪ್ರಮುಖ ಅಂಶಗಳು

ಗರ್ಭಿಣಿ ತಾಯಂದರಿಗೆ ಅಗತ್ಯತೆ ಪೂರೈಕೆಗೆ 6 ತಿಂಗಳ ಕಾಲ 6,000 ರೂ. ಭತ್ಯೆ

ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸಾಲಮನ್ನಾ
ವಿಧವಾ ವೇತನ 900 ರೂ.ನಿಂದ 2,500 ರೂ.ಗಳಿಗೆ ಹೆಚ್ಚಳ

ವರ್ಷಕ್ಕೆ 5 ಅಡುಗೆ ಅನಿಲ ಸಿಲಿಂಡರ್ ಉಚಿತ
ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ. 5000 ವರೆಗೆ ಹೆಚ್ಚಿನ ವೇತನ.

ಕನಿಷ್ಟ 15 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಯಕರ್ತೆಯರಿಗೆ ಪಿಂಚಣಿ.

ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ಪ್ರತಿಎಕರೆಗೆ 10,000 ರೂ. ಸಹಾಯ ಧನ.

ರೈತ ಯುವಕರನ್ನು ಮದುವೆ ಆಗುವ ಯುವತಿಯರಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ.

ಪ್ರತಿ ಕೃಷಿ ಕಾರ್ಮಿಕ ಕುಟುಂಬಕ್ಕೆ ಮಾಸಿಕ 2000 ರೂ. ಸಹಾಯಧನ.

ಪ್ರತಿ ಆಟೋ ಚಾಲಕನಿಗೆ ಪ್ರತಿ ತಿಂಗಳು 2 ಸಾವಿರ ರೂ. ಮಾಸಾಶನ.

ನೋಂದಾಯಿತ ಖಾಸಗಿ ಸೆಕ್ಯೂರಿಟಿ ಗಾರ್ಡ್‌ಗಳಿಗೆ ಮಾಸಿಕ 2 ಸಾವಿರ ರೂ. ಸಹಾಯಧನ.

ಹಿರಿಯ ನಾಗರೀಕರ ಮಾಸಾಶನವನ್ನು 1,200 ರೂ.ನಿಂದ 5000 ರೂ.ಗಳಿಗೆ ಏರಿಕೆ.

ವೃತ್ತಿನಿರತ ವಕೀಲರ ರಕ್ಷಣೆಗೆ ಕಾಯಿದೆ, ನೂತನವಾಗಿ ನೋಂದಾಯಿತ ವಕೀಲರ ಮಾಸಿಕ ಭತ್ಯೆ 2 ಸಾವಿರದಿಂದ 3 ಸಾವಿರಕ್ಕೆ ಏರಿಕೆ.

ರಾಜ್ಯ ಸರ್ಕಾರ ರದ್ದು ಮಾಡಿರುವ ಮುಸ್ಲಿಮರ ಶೇ.4ರಷ್ಟು ಮೀಸಲಾತಿ ಮರು ಜಾರಿ.

ಕಲಾವಿದರ ಮಾಸಾಶನವನ್ನು 2 ಸಾವಿರ ರೂ.ನಿಂದ 4 ಸಾವಿರಕ್ಕೆ ಏರಿಕೆ.

ಆರಕ್ಷಕರಿಗೆ ಅಭಯ, ನ್ಯಾಯಯುತ ವೇತನ ಮತ್ತು ಸೌಲಭ್ಯಗಳನ್ನು ಒದಗಿಸಲಾಗುವುದು
ಪಂಚರತ್ನ ಯೋಜನೆಗಳ ಜಾರಿ.

ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‌
ಡಿಗ್ರಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಸ್ಕೂಟರ್‌ ವಿತರಣೆ.

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮೆಡಿಕಲ್‌, ಇಂಜಿನಿಯರಿಂಗ್‌ಗೆ ಉಚಿತ ಪ್ರವೇಶ.

ಕೃಷಿ ಪಂಪಸೆಟ್‌ಗೆ 24/7 ಉಚಿತ ಗುಣಮಟ್ಟದ ವಿದ್ಯುತ್‌ ಸೌಲಭ್ಯ ಮತ್ತು ಸೋಲಾರ್‌ ಪಂಪ್‌ಗಳ ಅಳವಡಿಕೆ