Belagavi News In Kannada | News Belgaum

ಮಕ್ಕಳಿಗೆ ನೀಡುವ ಮೊಟ್ಟೆಯಲ್ಲೂ BJP ಮೋಸ: ಪ್ರಿಯಾಂಕಾ ಗಾಂಧಿ ಕಿಡಿ

ಖಾನಾಪುರ: ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಟ್ಟಿಲ್ಲ. ಕೋವಿಡ್ ಸಮಯದಿಂದಲೂ ಇವರ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ಗುತ್ತಿಗೆದಾರರ ಸಂಘದವರು ಪತ್ರ ಬರೆದರೂ ಪ್ರಧಾನಿ ಮೋದಿಯಿಂದ ಉತ್ತರ ಬರಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಖಾನಾಪುರ ಪಟ್ಟಣದ ಮಲಫ್ರಭ ಕ್ರೀಡಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಖಾನಾಪುರ ವಿಧಾನಸಭಾ ಮತಕ್ಷೇತ್ರದ  ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಟ್ಟಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಮುಂದುವರಿದು, ಕರ್ನಾಟಕದಲ್ಲಿ ಅರಣ್ಯ ಸಂಪತ್ತು, ಖನಿಜ ಸಂಪತ್ತು ಎಲ್ಲವೂ ಇದೆ. ಇಲ್ಲಿನ ಯುವಕರು ಶಿಕ್ಷಿತರಿದ್ದು ಅವರ ಭವಿಷ್ಯ ಉತ್ತಮವಾಗಿದೆ. ಇಡೀ ವಿಶ್ವದಲ್ಲೇ ಬೆಂಗಳೂರು ಸುಪ್ರಸಿದ್ಧವಾಗಿದೆ, ತಂತ್ರಜ್ಞಾನಕ್ಕೆ ಹೆಸರುವಾಸಿಯಾಗಿದೆ. ನಾನು ವಿದೇಶಕ್ಕೆ ಹೋದಾಗ ಕರ್ನಾಟಕದ ಯುವಕರು ಐಟಿಯಲ್ಲಿ ಕೆಲಸ ಮಾಡುವವರು ಸಿಕ್ಕಾಗ ಗರ್ವವಾಗುತ್ತೆ. ಆದ್ರೆ ಕರ್ನಾಟಕದಲ್ಲಿರುವ ಸರ್ಕಾರಕ್ಕೆ ಇದರ ಬಗ್ಗೆ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ./////