ಕಾಲ್ನಡಿಗೆ ಮೂಲಕ ಮತದಾನ ಜಾಗೃತಿ

ಬೆಳಗಾವಿ : ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕಾ ಸ್ವೀಪ್ ಸಮಿತಿ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ಶನಿವಾರ ಏಪ್ರಿಲ್.29 ರಂದು ಬಸ್ತವಾಡ ಗ್ರಾಮ ಪಂಚಾಯತ ಆವರಣದಲ್ಲಿ ಕಾಲ್ನನಡಿಗೆ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಭೊಯರ್ ಅವರು ಚಾಲನೆ ನೀಡಿದರು.
ಕರ್ನಾಟಕ ಚುನಾವಣಾ ಆಯೋಗ ನಿರ್ದೇಶನದಂತೆ ಏಪ್ರಿಲ್ 29 ರಂದು ಸಾರ್ವಜನಿಕರಿಗೆ ಮತಚಲಾವಾಣೆ ಪೂರ್ವದಲ್ಲಿ ಮತಗಟ್ಟೆಗಳ ವಿಕ್ಷಣೆ ಮತ್ತು ಮತಗಟ್ಟೆಗಳ ಮಾಹಿತಿ ನೀಡುವ ಕುರಿತು ವಿಶೇಷ ಕಾರ್ಯಕ್ರಮ ಆಯೋಜಿಸಲಾಯಿತು.
ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಭೊಯರ್ ಅವರು ನರೇಗಾ ಕೂಲಿ ಕಾರ್ಮಿಕರೊಂದಿಗೆ ಸಂವಾಹದ ನಡೆಸಿ ಮಾತನಾಡಿದ ಅವರು : ಗ್ರಾಮದ ಸಾರ್ವಜನಿಕರು ಮತ್ತು ನರೇಗಾ ಕಾಯಕ ಬಂದು, ಕೂಲಿ ಕಾರ್ಮಿಕರು ಎಲ್ಲರೂ ತಪ್ಪದೇ ಮೇ 10 ರಂದು ಮತದಾನ ಮಾಡಬೇಕು ಎಂದು ಹೇಳಿದರು.
ಪ್ರತಿ ವರ್ಷವು ಬೆಳಗಾವಿ ತಾಲ್ಲೂಕಿನಲ್ಲಿ ನರೇಗಾ ಕಾಮಗಾರಿ ಕೆಲಸಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೂಲಿ ಕಾರ್ಮಿಕರು ಭಾಗವಹಿಸುತ್ತಿದ್ದು, ಪ್ರಸಕ್ತ ಸಾಲಿನ ನರೇಗಾ ಕಾಮಗಾರಿಯಲ್ಲಿ ಭಾಗವಹಿಸಿ ನರೇಗಾ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ರವಿ ಬಂಗಾರೆಪ್ಪನವರ, ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಜೇಶ ದಾನವಾಡಕರ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶ್ವೇತಾ ಡಿ.ಆರ್ , ಜಿಲ್ಲಾ ಐಇಸಿ ಸಂಯೋಜಕ ಪ್ರಮೋದ ಗೋಡೆಕರ್, ಜಿಲ್ಲಾ ಎಸ್.ಬಿ.ಎಂ ಸಮಾಲೋಚಕ ಬಾಹುಬಲಿ ಮೆಳವಂಕಿ, ತಾಲ್ಲೂಕು ಐಇಸಿ ಸಂಯೋಜಕ ರಮೇಶ ಮಾದರ, ತಾಂತ್ರಿಕ ಸಹಾಯಕಿ ಶ್ರೀಮತಿ ಜ್ಯೊತಿ ಯರಗುದ್ದಿ, ಗ್ರಾಮ ಪಂಚಾಯತ ಸಿಬ್ಬಂದಿಗಳು ಇದ್ದರು.//////