ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ

ಬೆಳಗಾವಿ :ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಸೋಮವಾರ ಮೇ.1 ರಂದು ಕೂಲಿ ಕಾರ್ಮಿಕರೊಂದಿಗೆ ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಆಚರಣೆ ಮಾಡಲಾಯಿತು.
ತಾಲೂಕಾ ಪಂಚಾಯತ ಕಾರ್ಯನಿರ್ವಹಕ ಅಧಿಕಾರಿಗಳಾದ ವಿಲಾಸರಾಜ ಅವರು ಎಲ್ಲ ಕಾರ್ಮಿಕರಿಗೆ ಸಿಹಿ ಹಂಚುವ ಮೂಲಕ ಕಾರ್ಮಿಕ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ನಂತರ ತಾಲೂಕಾ ಸ್ವೀಪ್ ಸಮಿತಿವತಿಯಿಂದ ಮತದಾನ ಜಾಗೃತಿ ಹಮ್ಮಿಕೊಳ್ಳಲಾಯಿತು.
ಕಾರ್ಮಿಕರೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲರೂ ಕಡ್ಡಾಯ ಮತದಾನ ಮಾಡಬೇಕು. ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ನಿಮ್ಮ ಮತವನ್ನು ಚಲಾಯಿಸಬೇಕು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ, ಮತ ಚಲಾಯಿಸುವ ಮೂಲಕ ನಿಮ್ಮ ಹಕ್ಕನ್ನು ಚಲಾಯಿಸಿ. ನಿಮಗೆ ಬೇಕಾದ ನಾಯಕರನ್ನು ನೀವೇ ಆಯ್ಕೆ ಮಾಡಿಕೊಳ್ಳಬಹುದು ಎಂದು ತಿಳಿಸಿದರು. ಮೇ.10 ರಂದು ಎಲ್ಲರೂ ಮತ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಕರೆ ಕೊಟ್ಟರು.
ತಾಲೂಕಾ ಐಇಸಿ ಸಂಯೋಜಕರಾದ ಮಹಾಂತೇಶ ಬಾದವನಮಠ, ಬಿ. ಎಫ್,ಟಿ, ಸಂಜು ಕಾಡಗಿ, ಗ್ರಾಮ ಪಂಚಾಯತಿ ಗಣಕಯತ್ರ ನಿರ್ವಾಹಕ ಬರಮಪ್ಪಾ ಕೆಂಚಗಾರಟ್ಟಿ ಹಾಜರಿದ್ದರು.//////