Belagavi News In Kannada | News Belgaum

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ

ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ

‘ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ’

ಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ಮಂಗಳವಾರ ಬಿಡುಗಡೆ ಮಾಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಡಾ.ಜಿ. ಪರಮೇಶ್ವರ್, ಮಾಜಿ ಸಚಿವೆ ರಾಣಿ ಸತೀಶ್, ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪವನ್ ಖೇರಾ, ವಕ್ತಾರ ಗೌರವ್ ವಲ್ಲಭ್, ಪ್ರೊ. ರಾಜೀವ್ ಗೌಡ, ಪ್ರೊ ಕೆ ಈ ರಾಧಾಕೃಷ್ಣ, ಮತ್ತಿತರರು ಉಪಸ್ಥಿತರಿದ್ದರು.

ಪ್ರಣಾಳಿಕೆ ಭರವಸೆಗಳನ್ನು ಈಡೇರಿಸುವ ಪ್ರಮಾಣ ಸಂಕೇತವಾಗಿ ಪ್ರಣಾಳಿಕೆ ಹೊತ್ತಿಗೆಗೆ ಅರಿಶಿನ-ಕುಂಕುಮ ಹಚ್ಚಿ, ವೀಳ್ಯದೆಲೆ ಅಡಿಕೆ ಇಟ್ಟು ಸಾಂಪ್ರದಾಯಿಕವಾಗಿ ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು.