ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಬಡಿದ ರಣಹದ್ದು: ವಿಂಡೋ ಗ್ಲಾಸ್ ಪುಡಿಪುಡಿ

ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ರಾಜ್ಯಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಜೊತೆಗೆ ಇಂದು ಕಾಂಗ್ರೆಸ್ನ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಡಿ.ಕೆ. ಶಿವಕುಮಾರ್ ಮುಳುಬಾಗಿಲಿಗೆ ತೆರಳಲು ಹೆಚ್ಎಎಲ್ ಏರ್ಪೋರ್ಟ್ಗೆ ಬಂದಿದ್ದರು. ಇಲ್ಲಿಂದ ಮುಳುಬಾಗಿಲಿಗೆ ಡಿ.ಕೆ.ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ಹಾರಾಟ ವೇಳೆ ಹೆಲಿಕಾಪ್ಟರ್ ಮುಂಭಾಗದ ವಿಂಡೋ ಗಾಜು ಪುಡಿಪುಡಿಯಾಗಿದೆ.ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳುತ್ತಿದ್ದರು. ಈ ವೇಳೆ ಹೆಲಿಕಾಪ್ಟರ್ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್ ವಿಂಡೋ ಗ್ಲಾಸ್ಪುಡಿಪುಡಿಯಾಗಿದ್ದು ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ಇದರಿಂದ ಡಿಕೆ ಶಿವಕುಮಾರ್ ಗಾಭರಿಯಾಗಿದ್ದಾರೆ. ಸದ್ಯ ಯಾವುದೇ ಹಾನಿಯಾಗಿಲ್ಲ. ಡಿ.ಕೆ.ಶಿವಕುಮಾರ್ ಹೆಚ್ಎಎಲ್ ಏರ್ಪೋರ್ಟ್ಗೆ ಹಿಂದಿರುಗಿದ್ದಾರೆ.//////