Belagavi News In Kannada | News Belgaum

ಶ್ರೀ ಮಹಾಲಕ್ಷ್ಮಿ ದೇವಿ ಮಂದಿರದ ಕಳಸಾರೋಹಣ, ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾದ ವಿಪ ಸದಸ್ಯ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ತಾಲೂಕಿನ ಮಾವಿನಕಟ್ಟಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಮಂದಿರದ ಕಳಸಾರೋಹಣ ಹಾಗೂ‌ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ‌ ಭಾಗವಹಿಸಿದರು.
ದೇವಿಯ ದರ್ಶನದ ಪಡೆದ ನಂತರದಲ್ಲಿ ಅವರು ಎಲ್ಲ ಭಕ್ತರೊಂದಿಗೆ ಪ್ರಸಾದ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ದೇವಸ್ಥಾನ ಕಮಿಟಿ ವತಿಯಿಂದ ಚನ್ನರಾಜ ಹಟ್ಟಿಹೊಳಿ ಅವರನ್ನು ಸತ್ಕರಿಸಲಾಯಿತು.
ಗ್ರಾಮದ ಹಿರಿಯರು, ದೇವಸ್ಥಾನದ ಟ್ರಸ್ಟ್ ಕಮಿಟಿಯವರು, ನಾಗೇಶ ದೇಸಾಯಿ, ಶಂಕರಗೌಡ ಪಾಟೀಲ, ಮಹೇಶ ಸುಗೆಣ್ಣವರ ಹಾಗೂ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.//////