Belagavi News In Kannada | News Belgaum

ಅಕ್ರಮ ಆಸ್ತಿ ಸಂಪಾದನೆ 20 ಕೋಟಿ : CBI ಅಧಿಕಾರಿಗಳು ಶಾಕ್

ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದ ನೀರು ಮತ್ತು ವಿದ್ಯುತ್‌ ಸಲಹಾ ಸೇವೆ (ವ್ಯಾಪ್‌ಕಾಸ್‌) ಲಿಮಿಟೆಡ್‌ನ ಮಾಜಿ ಚೇರ್‌ಮನ್‌ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೀಂದರ್‌ ಕುಮಾರ್‌ ಗುಪ್ತಾ ಅವರಿಗೆ ಕೇಂದ್ರೀಯ ತನಿಖಾ ದಳ (CBI)ದ ಅಧಿಕಾರಿಗಳು ಶಾಕ್ ನೀಡಿದ್ದಾರೆ.

20 ಕೋಟಿ ರು.ಗೂ ಅಧಿಕ ನಗದನ್ನು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಗುಪ್ತಾ ಹಾಗೂ ಅವರ ಕುಟುಂಬದ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಇದಾದ ಬಳಿಕ ದಾಳಿ ನಡೆಸಿದ ಅಧಿಕಾರಿಗಳು ನಗದು ಸೇರಿದಂತೆ ಹಲವು ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದು ಕೇಂದ್ರ ಜಲಶಕ್ತಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾಗಿದೆ.