ಬೆಳಗಾವಿಯಲ್ಲಿ ಬಿಜೆಪಿ ಪರ ಪ್ರಚಾರಕ್ಕಿಳಿದ ಮಹಾ ಡಿಸಿಎಂ ಫಡ್ನವಿಸ್ಗೆ ಕಪ್ಪು ಬಾವುಟ ಪ್ರದರ್ಶಿಸಿದ ಎಂಇಎಸ್

ಬೆಳಗಾವಿ: ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮದಲ್ಲಿ ನಾಡದ್ರೋಹಿ ಎಂಇಎಸ್ ಕಾರ್ಯಕರ್ತರು ಮಹಾ ಡಿಸಿಎಂ ದೇವೇಂದ್ರ ಫಡ್ನವೀಸ್ ವಿರುದ್ಧ ಘೋಷಣೆ ಕೂಗಿ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಕಪ್ಪು ಬಾವುಟ ತೋರಿಸಲು ಶಿವಸೇನೆ ಮುಖಂಡ ಸಂಜಯ್ ರಾವತ್ ನಿನ್ನೆ(ಮೇ 3) ಬೆಳಗಾವಿಯಲ್ಲಿ ಕರೆ ನೀಡಿದ್ದರು. ಇಂದು ಬೆಳಗಾವಿಯ ತಿಲಕ್ ಚೌಕ್ ನಲ್ಲಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರವಿ ಪಾಟೀಲ್ ಪರ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಪ್ರಚಾರಕ್ಕೆ ಬಂದಾಗ ಅವರಿಗೆ ಎಂಇಎಸ್ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿದ್ದಾರೆ. ಹಾಗೂ ಅವರ ವಿರುದ್ಧ ಘೋಷಣೆ ಕೂಗಿದ್ದಾರೆ.
ಎಂಇಎಸ್ ಅಭ್ಯರ್ಥಿಗಳ ವಿರುದ್ಧ ಮಹಾರಾಷ್ಟ್ರ ನಾಯಕರ ಪ್ರಚಾರಕ್ಕೆ ನಾಡದ್ರೋಹಿ ಎಂಇಎಸ್ ಪುಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎಂಇಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಬೆಳಗಾವಿಯ ಉತ್ತರ ಕ್ಷೇತ್ರದಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಬಿಜೆಪಿ ಪ್ರಚಾರ ಸಭೆ ನಡೆದಿದೆ. ಸಭೆಯಲ್ಲಿ ಸಂಸದೆ ಮಂಗಲ ಅಂಗಡಿ, ಶಾಸಕ ಅನಿಲ್ ಬೆನಕೆ, ಶಂಕರಗೌಡ ಪಾಟೀಲ, ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ಭಾಗಿಯಾಗಿದ್ರು. ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು ವೇದಿಕೆ ಸುತ್ತಲೂ ಬ್ಯಾರಿಕೇಡ್ ಅಳವಡಿಸಲಾಗಿದೆ.//////