Belagavi News In Kannada | News Belgaum

ಕಾಂಗ್ರೆಸ್‌ ಪ್ರಚಾರದ ವೇಳೆ ಕಲ್ಲು ತೂರಾಟ: ಕಾರ್ಯಕರ್ತೆ ತಲೆಗೆ ಗಂಭೀರ ಗಾಯ

ವಿಜಯಪುರ: ಇಲ್ಲಿನ ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಪ್ರಚಾರ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಮಹಿಳಾ ಕಾರ್ಯಕರ್ತೆ ಶಾಂತಾಗೆ ತಲೆಗೆ ಕಲ್ಲು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಸಿ.ಎಸ್ ನಾಡಗೌಡ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಮುದ್ದೇಬಿಹಾಳ ಕ್ಷೇತ್ರದ ಗೋನಾಳ ಗ್ರಾಮದಲ್ಲಿ ನಡೆದ ಪ್ರಚಾರ ಕಾರ್ಯ ಕ್ರಮದ ವೇಳೆ ಘಟನೆ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಕಾರ್ಯಕರ್ತೆ ಶಾಂತಾ ಎಂಬಾಕೆಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲಿಸುತ್ತಿದ್ದಾರೆ./////