Belagavi News In Kannada | News Belgaum

ಮೊದಲ ಬಾರಿಗೆ ಸೋನಿಯಾ ಗಾಂಧಿ ಪ್ರಚಾರ

ನವದೆಹಲಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ನಾಲ್ಕು ವರ್ಷಗಳ ಬಳಿಕ ಮೊದಲ ಬಾರಿಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಹುಬ್ಬಳ್ಳಿಯಲ್ಲಿ ಶನಿವಾರ ಪ್ರಚಾರ ನಡೆಸಲಿದ್ದಾರೆ.
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಶಿವಾಜಿನಗರದಲ್ಲಿ ಭಾನುವಾರ ರ‍್ಯಾಲಿ ನಡೆಸಲಿದ್ದಾರೆ.
ಚುನಾವಣಾ ಅಧಿಸೂಚನೆ ಪ್ರಕಟವಾದ ಬಳಿಕ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಇಲ್ಲಿಯವರೆಗೆ 43 ರ‍್ಯಾಲಿಗಳು ಹಾಗೂ 13 ರೋಡ್‌ಶೋಗಳನ್ನು ನಡೆಸಿದ್ದಾರೆ. ಯುವಜನರು ಹಾಗೂ ಮಹಿಳೆಯರೊಂದಿಗೆ ಆರು ಸಂವಾದಗಳನ್ನು ನಡೆಸಿದ್ದಾರೆ. ಕಾರ್ಯಕರ್ತರ ಜತೆಗಿನ ಐದು ಸಭೆಗಳಲ್ಲಿ ಭಾಗಿಯಾಗಿದ್ದಾರೆ.
2019ರ ಲೋಕಸಭಾ ಚುನಾವಣೆಯ ಬಳಿಕ ಸೋನಿಯಾ ಗಾಂಧಿ ಅವರು ಆರೋಗ್ಯದ ಕಾರಣಕ್ಕೆ ಯಾವುದೇ ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾಗವಹಿಸಿಲ್ಲ. ‘ಭಾರತ್‌ ಜೋಡೊ ಯಾತ್ರೆ’ ಮಂಡ್ಯಕ್ಕೆ ಬಂದಾಗ (2022ರ ಅಕ್ಟೋಬರ್‌ 6) ಅವರು ರಾಹುಲ್‌ ಜತೆಗೆ ಹೆಜ್ಜೆ ಹಾಕಿದ್ದರು.