Belagavi News In Kannada | News Belgaum

ಕಾಂಗ್ರೆಸ್‌ನಿಂದ ದೇಶದ ಅಭಿವೃದ್ಧಿ ಸಾಧ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಯಮಕನಮರಡಿ:  ಯಮಕನಮರಡಿ  ವಿಧಾನಸಭಾ ಮತಕ್ಷೇತ್ರದ ದಡ್ಡಿ  ಹಾಗೂ ವಿವಿಧ ಗ್ರಾಮಗಳಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕಾಲನಡಿಗೆ ಮೂಲಕ ಮತಯಾಚಿಸಿದರು.

ದೇಶದ ಸಮಗ್ರ ಅಭಿವೃದ್ಧಿ ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸಾಧ್ಯ, ಹೀಗಾಗಿ ರಾಜ್ಯದಲ್ಲಿ ಬಹುಮತ ಅಂತರದಿಂದ ಕಾಂಗ್ರೆಸ್‌ ಗೆಲುವಿಗೆ ಮತದಾರರು ಆಶೀರ್ವಾದ ಮಾಡಬೇಕು ಎಂದು  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಭರ್ಜರಿ ಮತ ಬೇಟೆ ನಡೆಸಿದರು.

ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಕಾಂಗ್ರೆಸ್‌ ಪಕ್ಷ ತ್ಯಾಗ, ಬಲಿದಾನ ಮಾಡಿ ಇತಿಹಾಸ ಹೊಂದಿದೆ. ಆದರೆ ಬಿಜೆಪಿಗೆ ಯಾವುದೇ ಇತಿಹಾಸವಿಲ್ಲ ಎಂದರು.  ಕಾರ್ಯಕರ್ತರು ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಿ ಅಧಿಕಾರಕ್ಕೆ ತರುಲು ಪ್ರಯತ್ನಿಸಬೇಕು ಎಂದು ಹೇಳಿದರು.

ಬೆಲೆ ಏರಿಕೆಯಿಂದ ರಾಜ್ಯದ ಜನರಿಗೆ ಸಮಸ್ಯೆ ಯಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಅವರು ನೆಮ್ಮದಿ ಜೀವನ ನಡೆಸಲಿದ್ದಾರೆ. ಯಮಕನಮರಡಿ  ಕ್ಷೇತ್ರದಲ್ಲಿ ಹೈಟೆಕ್‌ ಸಿಸಿ ರಸ್ತೆ,  ನೀರಿನ ವ್ಯವಸ್ಥೆ ಹಾಗೂ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಲಾಗಿದೆ.  ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ದಿಗೆ ಸಹಕಾರ, ಹೀಗಾಗಿ ಕಾಂಗ್ರೆಸ್‌ ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪೀರೊಜ್‌ ಸೇಠ,  ಸಿದ್ದಿಕ್‌ ಅಂಕಲಗಿ ಕಾಂಗ್ರೆಸ್‌ ಮುಖಂಡರು ಇತರರು ಇದ್ದರು.//////