Belagavi News In Kannada | News Belgaum

ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಆರಂಭ ಹಲವು ಗಣ್ಯರಿಂದ ಮತದಾನ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಆರಂಭವಾಗಿದೆ. 224 ವಿಧಾನ ಸಭೆ ಕ್ಷೇತ್ರಗಳಿಗೆ ಒಟ್ಟೂ 58,545 ಮತಗಟ್ಟೆ ತೆರೆಯಲಾಗಿದ್ದು, ಎಲ್ಲ ಕಡೆ ಶಾಂತವಾಗಿ ಮತದಾನ ನಡೆಯುತ್ತಿದೆ.

ಒಟ್ಟೂ 5.30 ಕೋಟಿ ಜನ ಮತದಾನದ ಹಕ್ಕು ಹೊಂದಿದ್ದಾರೆ.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗ್ಗೆ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಮತಗಟ್ಟೆಗೆ ತೆರಳಿದ್ದಾರೆ. ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಪುತ್ರ ಭರತ ಹಾಗೂ ಪುತ್ರಿ ಅದಿತಿ ಸಾಥ್ ನೀಡಿದರು.

ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ವಿಶ್ವೇಶ್ವರಯ್ಯ ನಗರದ ಸರಕಾರಿ ಶಾಲೆಯ ಮತಗಟ್ಟೆಯಲ್ಲಿ ಬೆಳಿಗ್ಗೆಯೇ  ತಮ್ಮ ಮತವನ್ನು ಚಲಾಯಿಸಿದರು.

ರಾಜ್ಯದ ವಿವಿಧೆಡೆ ಜನಪ್ರತಿನಿಧಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಕಲಾವಿದರು, ಪತ್ರಕರ್ತರು  ಅಧಿಕಾರಿಗಳು ಮತ ಚಲಾಯಿಸುತ್ತಿದ್ದಾರೆ.

ಮಧ್ಯಾಹ್ನ ನಂತರ ಮಳೆಯ ಸಾಧ್ಯತೆ ಇರುವುದರಿಂದ ಬೆಳಗ್ಗೆಯೇ ಸಾಧ್ಯವಾದಷ್ಟು ಮತದಾನ ಮಾಡುವುದು ಉತ್ತಮ.