Belagavi News In Kannada | News Belgaum

ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗಾಗಿ ದುಡಿದ ಪಕ್ಷದ ಕಾರ್ಯಕರ್ತರಿಗೂ, ಮುಖಂಡರಿಗೂ, ನಾಯಕರಿಗೂ ಹಾಗೂ ಮತನೀಡಿ ಆಶೀರ್ವದಿಸಿದ ಎಲ್ಲಾ ಮತದಾರ ಬಂಧುಗಳಿಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಧನ್ಯವಾದ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾಡಿನ ಸಮಗ್ರ ಅಭಿವೃದ್ಧಿಯೇ ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಸಂಯಮದಿಂದ ವಿಜಯೋತ್ಸವ ಆಚರಿಸಬೇಕು. ಈ ಫಲಿತಾಂಶ ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದದ ವಿರುದ್ಧದ ಫಲಿತಾಂಶ. ಇದು ಕೇವಲ ಕಾಂಗ್ರೆಸ್ ಪಕ್ಷದ ಗೆಲುವಲ್ಲ, ಇದು ಕರ್ನಾಟಕದ ಗೆಲುವು. ಕನ್ನಡಿಗರ ಗೆಲುವು, ಪ್ರಜಾಪ್ರಭುತ್ವದ ಗೆಲುವು. ಈ ಗೆಲುವಿಗಾಗಿ ರಾಜ್ಯದ ಸಮಸ್ತ ಕನ್ನಡಿಗರೂ ಅಭಿನಂದಿಸುತ್ತೇನೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಸೀಟು ಸೇರಿದಂತೆ ಯಮಕನಮರಡಿಯಲ್ಲಿ ನನ್ನನ್ನು ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಿದ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ರಾತ್ರಿ ಹಗಲು ಶ್ರಮಪಟ್ಟಿದ್ದು, ಅವರೆಲ್ಲರಿಗೂ ತುಂಬು ಹೃದಯದ ಕೃತಜ್ಞತೆಗಳು ಕೋರುವುದಾಗಿ ತಿಳಿಸಿದ್ದಾರೆ.//////