ಡಿ.ಕೆ.ಶಿವಕುಮಾರ ಜನ್ಮದಿನಕ್ಕೆ `ಬೆಳಗಾವಿ’ ಶುಭಾಷಯ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಶಾಸಕರು ಶುಭ ಹಾರೈಸಿದರು.
ಸೋಮವಾರ ಬೆಳಗ್ಗೆ ಶಿವಕುಮಾರ ನಿವಾಸಕ್ಕೆ ತೆರಳಿದ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ನೂತನ ಶಾಸಕರಾದ ಮಹೇಂದ್ರ ತಮ್ಮಣ್ಣವರ್, ರಾಜು ಸೇಠ್ ಅವರು ಜನ್ಮ ದಿನ ಮತ್ತು ಪ್ರಸ್ತುತ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ್ದಕ್ಕಾಗಿ ಶಿವಕುಮಾರ ಅವರನ್ನು ಅಭಿನಂದಿಸಿ, ಶುಭ ಹಾರೈಸಿದರು.
ಇದೇ ವೇಳೆ, ಬೆಳಗಾವಿ ಜಿಲ್ಲೆಯಲ್ಲಿ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೆಚ್ಚಿನ ಸಂಖ್ಯೆಯ ಶಾಸಕರನ್ನು ಆಯ್ಕೆ ಮಾಡಿದ್ದಕ್ಕಾಗಿ ಡಿ.ಕೆ.ಶಿವಕುಮಾರ ಅವರು ಬೆಳಗಾವಿ ಜಿಲ್ಲೆಯ ಜನರಿಗೆ ಹಾಗೂ ಇದಕ್ಕಾಗಿ ಹೆಚ್ಚಿನ ಶ್ರಮವಹಿಸಿದ ಎಲ್ಲ ನಾಯಕರಿಗೆ ಧನ್ಯವಾದ ತಿಳಿಸಿದರು./////