ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಳಗಾವಿ, ಮೇ.15: ತೋಟಗಾರಿಕೆ ಇಲಾಖೆಯ ತೋಟಗಾರಿಕೆ ಪ್ರಾಯೋಗಿಕ ತರಬೇತಿ ಯೋಜನೆಯಡಿಯಲ್ಲಿ 2023-24 ನೇ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯ ಅಭ್ಯರ್ಥಿಗಳಿಗೆ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಡ್ಯಾಂ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜೂನ್.1 2023 ರಿಂದ ಮಾರ್ಚ.30 2024 ರ ವರೆಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ 11 ಪುರುಷ ಹಾಗೂ 5 ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಉತ್ತೀರ್ಣರಾಗಿರಬೇಕು, ತರಬೇತಿ ಬಯಸುವ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು ಈ ಬಗ್ಗೆ ಪಹಣಿಯನ್ನು (RTC) ನೀಡುವುದು ಕಡ್ಡಾಯವಾಗಿರುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ 30 ವರ್ಷಗಳು. ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷಗಳು ಹಾಗೂ ಗರಿಷ್ಠ 33 ವರ್ಷಗಳು ಇರಬೇಕು.
ಅರ್ಜಿಗಳನ್ನು ಬೆಳಗಾವಿಯ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) /ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ರ ಕಛೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in/ ನಲ್ಲಿ ಡೌನ್‍ಲೋಡ ಮಾಡಿಕೊಳ್ಳಬಹುದು.
ಮೇ.22 2023 ರ ಸಂಜೆ 5 ಗಂಟೆಯ ವರೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ರಾಣಿ ಚನ್ನಮ್ಮ ವೃತ್ತ, ಬೆಳಗಾವಿ ಕಛೇರಿಗೆ ಸಲ್ಲಿಸಬೇಕು.
ಅಭ್ಯರ್ಥಿಗಳು ಮೇ.25 2023 ರಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ಬೆಳಗಾವಿ ರವರ ಕಛೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ನೇರವಾಗಿ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಈ ಸಂಬಂಧವಾಗಿ ಈ ಕಛೇರಿಯಿಂದ ಮತ್ತೆ ಯಾವುದೇ ಪತ್ರ ವ್ಯವಹಾರ ಮಾಡಲಾಗುವುದಿಲ್ಲ. ಈ ಕುರಿತು ದೂರವಾಣಿ ಸಂಖ್ಯೆ 0831-2451422 ಮತ್ತು ಹಿಡಕಲ್ ಡ್ಯಾಂ ತರಬೇತಿ ಕೇಂದ್ರದ ದೂರವಾಣಿ ಸಂಖ್ಯೆ 08333-263008 ಗೆ ಸಂಪರ್ಕಿಸಿ ವಿಚಾರಿಸಬಹುದು.
ಹೆಚ್ಚಿನ ವಿವರಗಳಿಗೆ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ರವರ ಕಛೇರಿಯಲ್ಲಿ ವಿಚಾರಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.