ಲಿಂಗಾಯತ ಸಮಾಜದವರೇ ಆಯ್ಕೆಯಾಗಿದ್ದು ಅವರಿಗೂ ಪಕ್ಷದಲ್ಲಿ ಸೂಕ್ತವಾದ ಸ್ಥಾನ ಮಾನ ನೀಡಬೇಕೆಂದು ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದರು.

ಬೆಳಗಾವಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿದೆ. 34 ಜನ ವೀರಶೈವ ಲಿಂಗಾಯತ ಸಮಾಜದವರೇ ಆಯ್ಕೆಯಾಗಿದ್ದು ಅವರಿಗೂ ಪಕ್ಷದಲ್ಲಿ ಸೂಕ್ತವಾದ ಸ್ಥಾನ ಮಾನ ನೀಡಬೇಕೆಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 136 ಸ್ಥಾನಗಳಲ್ಲಿ ಸ್ಪಷ್ಟ ಬಹುಮತ ಸಿಕ್ಕಿದೆ. ಈ ಪೈಕಿ 34 ಜನ ವೀರಶೈವ ಲಿಂಗಾಯತ ಸಮಾಜದ ಶಾಸಕರೂ, ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ವೀರಶೈವ ಲಿಂಗಾಯತ ಸಮಾಜದ ಪ್ರಭಾವಿ ನಾಯಕರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಇದನ್ನು ಪರಿಗಣನೆಗೆ ತೆಗೆದುಕೊಂಡು ವೀರಶೈವ ಲಿಂಗಾಯತ ಸಮಾಜದ ಶಾಸಕರಿಗೂ ಯೋಗ್ಯವಾದ ಸ್ಥಾನ ಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಕೇವಲ ಒಂದೇರಡು ಸಮಾಜದವರು ಮಾತ್ರ ಮತ ನೀಡಿಲ್ಲ ವೀರಶೈವ ಲಿಂಗಾಯತ ಸಮಾಜ ಸೇರಿದಂತೆ ಹಲವಾರು ಸಮಾಜದವರು ಪಕ್ಷಕ್ಕೆ ಮತದಾನ ಮಾಡುವುದರ ಮೂಲಕ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ಯಾವ ಸಮುದಾಯಕ್ಕೂ ಅನ್ಯಾಯವಾಗದೆ, ವೀರಶೈವ ಲಿಂಗಾಯತ ಸಮುದಾಯದ ಶಾಸಕರಿಗೂ ಯೋಗ್ಯವಾದ ಸ್ಥಾನ ಮಾನ ನೀಡಬೇಕೆಂದು ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.