Belagavi News In Kannada | News Belgaum

ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಕಾಸರಗೋಡು: ಕಾಲೇಜು ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಆದೂರು ಠಾಣೆ ವ್ಯಾಪ್ತಿಯ ಕಿನ್ನಿಂಗಾರ್ ಎಂಬಲ್ಲಿ ನಡೆದಿದೆ.

ಬೆಳ್ಳೂರು ಕಿನ್ನಿಂಗಾರ್ ಬೇಳೆರಿಯ ನಿವಾಸಿ ಕೊರಗಪ್ಪ ಎಂಬವರ ಪುತ್ರಿ ಪ್ರಣಮಿಕಾ (16) ಮೃತಳು ಎಂದು ಗುರುತಿಸಲಾಗಿದ್ದು, ಬೆಳ್ಳೂರು ವಾಣಿನಗರ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ವನ್ ವಿದ್ಯಾರ್ಥಿನಿ.

ಸೋಮವಾರ ರಾತ್ರಿ ಸ್ನಾನಕ್ಕೆಂದು ತೆರಳಿದ್ದ ಈಕೆ ಹೊರ ಬಾರದ ಹಿನ್ನೆಲೆಯಲ್ಲಿ ಮನೆಯವರು ಬಾಗಿಲು ಮುರಿದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮನೆಯವರು ಹಾಗೂ ಪರಿಸರ ವಾಸಿಗಳು ಕೆಳಗಿಳಿಸಿ ಕಾಸರಗೋಡು ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ./////