ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡಲು ಶಾಸಕ ಆಸೀಫ್ ಸೇಠ್ ಒತ್ತಾಯ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡಲು ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸೀಫ್ ಸೇಠ್ ಒತ್ತಾಯಿಸಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಸತೀಶ್ ಜಾರಕಿಹೊಳಿ ಅವರ ನಾಯಕತ್ವ ಇದೆ. ಸತೀಶ್ ಜಾರಕಿಹೊಳಿ ಡಿಸಿಎಂ ಮಾಡಬೇಕು ಎಂದು ಹೈಕಮಾಂಡ್‌ಗೆ ವಿನಂತಿ ಮಾಡುತ್ತೇನೆ. ನಾನು ಪ್ರಚಾರ ಭಾಷಣದಲ್ಲಿ ನೀಡಿದ ಹೇಳಿಕೆಗೆ ಬದ್ಧನಿದ್ದೇನೆ. ಇನ್ನು ಇದೇ ವೇಳೆ ಜಮೀರ್ ಅಹಮ್ಮದ್‌ಗೆ ಡಿಸಿಎಂಗೆ ಸ್ಥಾನ ನೀಡಲು ಮುಸ್ಲಿಂ ಸಮುದಾಯ ಆಗ್ರಹ ವಿಚಾರ ‘ಅದು ಹೈಕಮಾಂಡ್‌ಗೆ ಬಿಟ್ಟಿದ್ದು, ಈಗಾಗಲೇ ಎಲ್ಲಾ ಕಾಂಗ್ರೆಸ್ ಶಾಸಕರು ಹೈಕಮಾಂಡ್ ನಿರ್ಣಯ ಮಾಡಲಿ ಎಂದು ಹೇಳಿದ್ದೇವೆ ಎಂದು ತಿಳಿಸಿದ್ದಾರೆ./////