Belagavi News In Kannada | News Belgaum

ಸಿದ್ದರಾಮಯ್ಯಗೆ ಸಿಎಂ ಪಟ್ಟ: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಸಿದ್ದರಾಮಯ್ಯಗೆ ಸಿಎಂ ಪಟ್ಟ ನೀಡುವುದು ಬಹುತೇಕ ಖಚಿತ ಎನ್ನಲಾಗಿದ್ದು, ಸಿದ್ದರಾಮಯ್ಯ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕುಮಾರಕೃಪಾ ಬಳಿ ಇರುವ ಸಿದ್ದರಾಮಯ್ಯ ನಿವಾಸದ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, 70 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಒಂದು ಕೆಎಸ್ ಆರ್ ಪಿ ವಾಹನ ಸೇರಿ 70 ಕ್ಕೂ ಹೆಚ್ಚು ಮಂದಿಯನ್ನು ನಿಯೋಜನೆ ಮಾಡಲಾಗಿದೆ.ಸಿದ್ದರಾಮಯ್ಯಗೆ ಸಿಎಂ ಪಟ್ಟ ನೀಡುತ್ತಿರುವ ಹಿನ್ನೆಲೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಬೆಂಗಳೂರಿನ ಹಲವು ಕಡೆ ಸಿದ್ದರಾಮಯ್ಯ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕರ್ನಾಟಕದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರು ಬಹುತೇಕ ಫಿಕ್ಸ್ ಆಗಿದ್ದು, ಕಾಂಗ್ರೆಸ್ ಹೈಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎನ್ನಲಾಗಿದೆ. ಇಂದು ರಾಹುಲ್ ಗಾಂಧಿ ಭೇಟಿ ಬಳಿಕ ‘ಸಿದ್ದರಾಮಯ್ಯ ಸಿಎಂ’ ಎಂದು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಲಿ ಎಂದು ಈ ಹಿಂದೆ ರಾಹುಲ್ ಗಾಂಧಿ ಒಲವು ವ್ಯಕ್ತಪಡಿಸಿದ್ದರು. ಇಂದು ಹೈ ವೋಲ್ಟೇಜ್ ಸಭೆ ನಡೆಯಲಿದ್ದು, ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ./////