ನಾಲ್ಕೈದು ಜನ ಸೇರಿ ಯುವಕನ ಬರ್ಬರ ಹತ್ಯೆ. ಪೊಲೀಸ್ ಇಲಾಖೆಯಿಂದ ಪರಿಶೀಲನೆ

ಬೆಳಗಾವಿ: ನಾಲ್ಕೈದು ಜನ ಸೇರಿ ಯುವಕನ ಬರ್ಬರ ಹತ್ಯೆ. ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ(23) ಎಂಬ ಯುವಕನನ್ನು ನಾಲೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹಳೆಯ ದ್ವೇಷದಿಂದಲೇ ಕೊಲೆಗೈದಿರುವುದು ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ.
ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಾರೀಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.