Belagavi News In Kannada | News Belgaum

ನೂತನ ಸಿಎಂ, ಡಿಸಿಎಂ ಪ್ರಮಾಣವಚನಕ್ಕೆ ಆಗಮಿಸಲಿದ್ದಾರೆ 8 ಮುಖ್ಯಮಂತ್ರಿಗಳು

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದು, ಐತಿಹಾಸಿಕ ಕಾರ್ಯಕ್ರಮಕ್ಕೆ 8 ಮುಖ್ಯಮಂತ್ರಿಗಳು ಆಗಮಿಸುವ ನಿರೀಕ್ಷೆ ಇದೆ..

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸುರೇನ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ..

ಇನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರೀಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ನಟಿ, ಮಾಜಿ ಸಂಸದೆ ರಮ್ಯಾ, ನಟ ಶಿವರಾಜ್ ಕುಮಾರ್, ದುನಿಯಾ ವಿಜಯ್, ಕಮಲ್ ಹಾಸನ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗುತ್ತಿದ್ದಾರೆ..