ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸತೀಶ್ ಜಾರಕಿಹೊಳಿ

ಬೆಂಗಳೂರು: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಹಾಗೂ ಮೊದಲ ಬಾರಿಗೆ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು.
ಇದೇ ವೇಳೆ ನೂತನ ಎಂಟು ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಸತೀಶ್ ಜಾರಕಿಹೊಳಿ ಅವರು ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲ ಹಾಗೂ ಇತರರ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನೆರವೇರಿತು. ಜತೆಗೆ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್, ಹಿಮಾಚಲಪ್ರದೇಶದ ಸಿಎಂ ಸುಖ್‌ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ./////