Belagavi News In Kannada | News Belgaum

ನೇಣು ಬಿಗಿದುಕೊಂಡು ಹೆಡ್ ಕಾನ್ಸಟೇಬಲ್ ಆತ್ಮಹತ್ಯೆ

ಕಲಬುರಗಿ: ನಗರದ ಡಿಎಆರ್ ಹೆಡ್ ಕ್ವಾರ್ಟರ್ಸ್​ನಲ್ಲಿ ನೇಣು ಬಿಗಿದುಕೊಂಡು ಹೆಡ್ ಕಾನ್ಸಟೇಬಲ್
ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪಾಂಡುರಂಗ (47) ಆತ್ಮಹತ್ಯೆಗೆ ಮಾಡಿಕೊಂಡ ರ್ದುದೈವಿ. ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಮ್ಮನಚೋಡ್ ಗ್ರಾಮದ ನಿವಾಸಿ ಪಾಂಡುರಂಗ ಅವರು ಕಲಬುರಗಿ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ(ಮೇ.20) ರಾತ್ರಿ 10 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಇನ್ನು ಶಕೆ ಇದೆ ಎಂದು ಇಬ್ಬರು ಮಕ್ಕಳು ಮನೆಯ ಮೇಲ್ಚಾವಣಿಯಲ್ಲಿ ಮಲಗಿದ್ದು, ಗಂಡ ಹೆಂಡತಿ‌ ಇಬ್ಬರು ಕ್ವಾಟರ್ಸ್​ನ ಬೆಡ್ ರೂಮ್​ನಲ್ಲಿ ಮಲಗಿದ್ದರು. ನಸುಕಿನ ಜಾವ ಮನೆಯ ಅಡುಗೆ ಕೊಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.//////