Belagavi News In Kannada | News Belgaum

ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸತೀಶ್​ ಜಾರಕಿಹೊಳಿ

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ನೂತನ ಶಾಸಕರಿಂದ ಪ್ರಮಾಣವಚನ ಸ್ವೀಕಾರ ಪ್ರಕ್ರಿಯೆ ನಡೆದಿದ್ದು, ಯಮಕನಮರಡಿ ಶಾಸಕರಾದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ್​ ಜಾರಕಿಹೊಳಿ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಒಂದೆಡೇ  ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ್​ ಜಾರಕಿಹೊಳಿ ಅವರು  ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ  ಬೆಳಗಾವಿ ಜಿಲ್ಲೆಯಾದ್ಯಂತ  ಸತೀಶ್‌ ಜಾರಕಿಹೊಳಿ ಅಭಿಮಾನಿಗಳು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ 32 ಅಡಿ ಎತ್ತರದ ಕಟೌಟ್‌ ನಿರ್ಮಿಸಿ, ಪಟಾಕಿ ಸಿಡಿಸಿ-ಸಿಹಿ ಹಂಚಿ ಸಂಭ್ರಮಾಚರಿಸಿದ್ದಾರೆ.


ಕರ್ನಾಟಕದಲ್ಲಿ ಕಾಂಗ್ರೆಸ್​ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದ್ದು,  ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ  11ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿ ಬಿಜೆಪಿಯನ್ನು ದೂಳಿಪಟ ಮಾಡಿದ್ದಾರೆ. ಒಟ್ಟಾರೆ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಕಾಂಗ್ರೆಸ್‌ ಸ್ಥಾನ ಪಡೆಯುವಲ್ಲಿ  ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ್​ ಜಾರಕಿಹೊಳಿ ಪ್ರಮುಖ ಪಾತ್ರ ವಹಿಸಿದ್ದು,  ಇಂದು  ಸಾಹುಕಾರ್‌  ಶ್ರಮಕ್ಕೆ ಸಚಿವ ಸ್ಥಾನ ಒಲಿದು ಬಂದಿದೆ.//////