Belagavi News In Kannada | News Belgaum

ಕೆಎಸ್ಆರ್‌ಟಿಸಿ ಬಸ್ ಪಲ್ಟಿ: 7 ಪ್ರಯಾಣಿಕರಿಗೆ ಗಾಯ

ರಾಮದುರ್ಗ: ಭೀಕರ ಅಪಘಾತದಲ್ಲಿ ಕೆ ಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಬಿದ್ದು 7 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರು ಬಳಿ ನಡೆದಿದೆ.
ಮುಳ್ಳೂರು ಘಾಟ್ ನಲ್ಲಿ ಕೆ ಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಬಿದ್ದಿದ್ದು, 7 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ರಾಮದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ./////