ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶ ಪತ್ರ ಪಡೆಯಲು ಸೂಚನೆ

ಬೆಳಗಾವಿ : 2023-24ನೇ ಸಾಲಿಗೆ ಬೆಳಗಾವಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಾದ ರಾಮತೀರ್ಥ ನಗರ ಬೆಳಗಾವಿ, ಕಿತ್ತೂರು ತಾಲೂಕಿನ ಹೂಲಿಕಟ್ಟಿ, ಚಿಕ್ಕೋಡಿ ತಾಲೂಕಿನ ಹಿರೇಕೋಡಿ, ಮೂಡಲಗಿ, ರಾಮದುರ್ಗ ತಾಲೂಕಿನ ಸಾಲಹಳ್ಳಿ ಹಾಗೂ ಕಾಗವಾಡ ತಾಲೂಕಿನ ಐನಾಪೂರ ಇಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಭಾನುವಾರ ಮೇ.28 2023 ರಂದು ನಿಗದಿಪಡಿಸಿದ್ದು, ಅರ್ಜಿ ಸಲ್ಲಿಸಿದ ಸಂಬಂಧಪಟ್ಟ ವಸತಿ ಶಾಲೆಗಳಿಂದ ಮೇ.23 ರಿಂದ ಮೇ.27 2023 ರೊಳಗಾಗಿ ಪ್ರವೇಶ ಪತ್ರವನ್ನು ಪಡೆಯುವಂತೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಪಾಲಕರು/ಪೆÇೀಷಕರಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಸೂಚಿಸಿದ್ದಾರೆ.//////