2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಪೂರ್ವ ಸಿದ್ಧತೆ ಸಭೆ

ಬೆಳಗಾವಿ: ಪ್ರಸಕ್ತ ವರ್ಷದ ಶಾಲಾ ಪ್ರಾರಂಭೋತ್ಸವ ಅದ್ದೂರಿ ಹಾಗೂ ಆಕರ್ಷಣೀಯವಾಗಿ ನೆರವೇರಿಸಬೇಕು. ಮಕ್ಕಳಲ್ಲಿ ಶಾಲೆ ಪ್ರಾರಂಭದ ದಿನದ ಉತ್ಸಾಹ ವರ್ಷವಿಡೀ ಇರುವಂತೆ ಶಾಲಾ ಪರಿಸರ ನಿರ್ಮಾಣವಾಗಬೇಕು. ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಜಿಲ್ಲಾ ಪಂಚಾಯತ್ ವತಿಯಿಂದ ನಿರಂತರ ಸಹಕಾರ ನೀಡಲಾಗುವದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ (ಮೇ.25) ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವದ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂತ್ರಜ್ಞಾನ ಬಳಕೆ ಮಾಡಿಕೊಂಡು ಶಿಕ್ಷಕರು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು. ಶಾಲೆಯಲ್ಲಿ ಪಾಠಬೋಧನೆ ಪ್ರಯೋಗಾಧಾರಿತವಾಗಿರಬೇಕು. ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್ ಹಾಗೂ ಇಲಾಖೆಯ ಪೆÇ್ರೀತ್ಸಾಹದಾಯಕ ಯೋಜನೆಗಳು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ವಿತರಣೆಯಾಗಬೇಕು ಎಂದು ಜಿ ಸೂಚನೆ ನೀಡಿದರು.
ಅದೇ ರೀತಿಯಲ್ಲಿ ಶಾಲಾ ಪ್ರಾರಂಭದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಅಗತ್ಯ ಮಾರ್ಗದರ್ಶನ ಮಾಡಿ ಶೈಕ್ಷಣಿಕ ಮಾರ್ಗಸೂಚಿಯನ್ವಯ ಕರ್ತವ್ಯ ನಿರ್ವಹಿಸಲು ಜಿ
ಪಂ ಸಿಇಓ ಹರ್ಷಲ್ ಬೋಯರ್ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ, ಬೆಳಗಾವಿ (ದ) ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರು, ಡಯಟ್, ಪ್ರಾಚಾರ್ಯರು, ಶಿಕ್ಷಣಾಧಿಕಾರಿಗಳು, ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿಗಳು, ಅಕ್ಷರದಾಸೋಹ ಶಿಕ್ಷಣಾಧಿಕಾರಿಗಳು, ಎರಡೂ ಜಿಲ್ಲೆಗಳ ಎಲ್ಲ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಸಹಾಯಕ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ಬೆಳಗಾವಿ(ದ) ಶೈಕ್ಷಣಿಕ ಜಿಲ್ಲೆಯ ಎಲ್ಲ ವಲಯಗಳ ಇ.ಸಿ.ಓಗಳು, ಬಿಆರ್ಪಿಗಳು, ಸಿಆರ್ಪಿಗಳು ಹಾಜರಿದ್ದರು. ಸಹಾಯಕ ಯೋಜನಾ ಸಮನ್ವಯಾಧಿಕಾರಿಗಳಾದ ಆರ್ಜಿ ಮೆಳವಂಕಿ ಇವರು ನಿರೂಪಿಸಿದರು. ಶಿಕ್ಷಣ ಇಲಾಖೆಯ ಅಧಿಕಾರಿ ಬಸವರಾಜ ನಾಲತವಾಡ ಅವರು ಸಭೆಯಲ್ಲಿ ಉಪಸ್ಥಿತರಿದ್ದರು./////