Belagavi News In Kannada | News Belgaum

ಎಸ್ಪಿ ಫೋನ್ ಇನ್ ಕಾರ್ಯಕ್ರಮಕ್ಕೆ ಭಾರೀ ಸ್ಪಂದನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಇತಿಹಾಸದಲ್ಲಿಯೇ‌ ಮೊದಲ ಬಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ನೇತೃತ್ವದಲ್ಲಿ ನಡೆಸಿದ ಸಾರ್ವಜನಿಕರ ಸಮಸ್ಯೆಯ ಕುರಿತು ಬಗೆ ಹರಿಸಲು ಹಮ್ಮಿಕೊಳ್ಳಲಾದ ಫೋನ್ ಇನ್ ಕಾರ್ಯಕ್ರಮಕ್ಕೆ ಭಾರೀ ಸ್ಪಂದನೆ ದೊರೆತಿದೆ‌.

ಹೌದು….ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೆಲ ಫೋನ್ ಇನ್ ಕಾರ್ಯಕ್ರಮಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಎಸ್ಪಿ ಡಾ. ಸಂಜೀವ ಪಾಟೀಲ ತಂಡ ಶುಕ್ರವಾರ ನಡೆಸಿದ 12ನೇ ಫೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಜಿಲ್ಲೆಯಾದ್ಯಂತ, ಬೆಳಗಾವಿಯ ನಗರದಿಂದ ಕೂಡಾ ಸಾಕಷ್ಟು ಫೋನ್ ಕರೆಗಳು ಬಂದಿದ್ದು, ತಮ್ಮ ಸಮಸ್ಯೆಗಳನ್ನು ಎಸ್ಪಿ ಡಾ. ಸಂಜೀವ ಪಾಟೀಲ‌ ಅವರು ಮೇಲಿನ ಕಮಿಷನರ್ ಅವರಿಗೆ ತಿಳಿಸಿ ತಮ್ಮ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.
ಫೋನ್ ಇನ್ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ವೇಣುಗೋಪಾಲ, ಪೊಲೀಸ್ ಸಿಬ್ಬಂದಿಗಳಾದ ಡಿಎಸ್ಪಿ ಜೇಮ್ಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.//////