ಪಕ್ಷ ಸಂಘಟನೆ ದೃಷ್ಟಿಯಿಂದ ಹೊಸಬರಿಗೂ ಅವಕಾಶ ನೀಡಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಂಗಳೂರು: ನಾಳೆ ಬೆಳಗ್ಗೆ 11:30ರ ವೇಳೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯುತ್ತದೆ. ಯಾರಿಗೆ ಸಚಿವ ಸ್ಥಾನ ಎಂಬುದು ಪಟ್ಟಿ ಬಿಡುಗಡೆ ಬಳಿಕ ಗೊತ್ತಾಗುತ್ತೆ. ಪಕ್ಷ ಸಂಘಟನೆ ದೃಷ್ಟಿಯಿಂದ ಹೊಸಬರಿಗೂ ಅವಕಾಶ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನಿಷ್ಠ 10 ಹೊಸಬರಿಗೆ ಅವಕಾಶ ನೀಡಬೇಕು ಅಂತ ಹೇಳಿದ್ದೇನೆ. ಅದೇ ರೀತಿ ಈ ಬಾರಿ ಹೊಸಬರಿಗೂ ಅವಕಾಶ ನೀಡುತ್ತಿದ್ದಾರೆ. 1-2 ತಿಂಗಳಿನಲ್ಲಿ ನಿಗಮ ಮಂಡಳಿಗಳ ಸ್ಥಾನ ಸಹ ಭರ್ತಿ ಆಗುತ್ತೆ ಎಂದು ಹೇಳಿದರು./////