Belagavi News In Kannada | News Belgaum

ಮದ್ಯ ಮಾರಾಟ ನಿಷೇದ

ಬೆಳಗಾವಿ : ಬೆಳಗಾವಿ ನಗರದಲ್ಲಿ ಮೇ.27 ರಂದು ಛತ್ರಪತಿ ಶಿವಾಜಿ ಜಯಂತಿಯ ಮೆರವಣಿಗೆ ನಡೆಯಲಿದ್ದು, ಮೇ.27 ರಂದು ಬೆಳಿಗ್ಗೆ 6 ಗಂಟೆಯಿಂದ ಮೇ.28 ರಂದು ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟದ ಅಂಗಡಿಗಳು, ಬಾರ್/ರೆಸ್ಟೋರೆಂಟ್‍ಗಳು, ಕ್ಲಬ್‍ಗಳು ಹಾಗೂ ದಾಸ್ತಾನು ಡಿಪೋಗಳಿಂದ ಸರಬರಾಜನ್ನು ಬಂದ್ ಮಾಡುವಂತೆ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಎಂ. ಬಿ ಬೋರಲಿಂಗಯ್ಯ ಅವರು ಆದೇಶ ಹೊರಡಿಸಿರುತ್ತಾರೆ.
ಸದರಿ ಆದೇಶವನ್ನು ಉಲ್ಲಂಘಿಸಿದವರ ವಿರುದ್ದ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21(1) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 31 ರ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಬೋರಲಿಂಗಯ್ಯ ಎಂ. ಬಿ. ಐಪಿಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.//////