Belagavi News In Kannada | News Belgaum

ಮಾಜಿ ಸಿಎಂ ಬಿಎಸ್‌ವೈ ಭೇಟಿಯಾದ ಕನಕಪುರ ಬಂಡೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಗುರುವಾರ ಭೇಟಿ ಮಾಡಿದರು.
ಯಡಿಯೂರಪ್ಪ ಅವರನ್ನು ಸನ್ಮಾನಿಸಿದ ಡಿ.ಕೆ.ಶಿವಕುಮಾರ, ಇದೊಂದು ಸೌಜನ್ಯದ ಭೇಟಿ ಎಂದಿದ್ದಾರೆ. ಯಡಿಯೂರಪ್ಪ ಅವರಿಗೆ ಶಾಲು, ಹಾರ ಹಾಕಿ ಸನ್ಮಾನಿಸಿದ ನಂತರ ಮಾಧ್ಯಮ ಪ್ರತಿನಿಧಿಗಳು ಹಾಗೂ ಅಲ್ಲಿದ್ದವರನ್ನೆಲ್ಲ ಹೊರಗೆ ಕಳಿಸಿ ಇಬ್ಬರೇ ಕೆಲಕಾಲ ಮಾತು ಕತೆ ನಡೆಸಿದರು.///