Belagavi News In Kannada | News Belgaum

ಜೂ.9 ರಿಂದ 11ರ ವರೆಗೆ ಅಂತಾರಾಷ್ಟ್ರೀಯ ಮಾಧ್ಯಮ ಕಾರ್ಯಾಗಾರ

ಬೆಳಗಾವಿ: ಜೂ.9 ರಿಂದ 11ರ ವರೆಗೆ ಬೆಳಗಾವಿಯ ಕೆಎಲ್ಇ ಜೀರಗೆ ಸಭಾಂಗಣದಲ್ಲಿ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಮಾಧ್ಯಮ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಅಧ್ಯಕ್ಷ ದಿಲೀಪ್ ಕುರಂದವಾಡೆ ಹೇಳಿದರು.
ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದ ವಿವಿಧ ಕಡೆಗಳಿಂದ ಸಮಾರು 300 ಜನ ಪತ್ರಕರ್ತರು ಭಾಗವಹಿಸಲಿದ್ದಾರೆ. ಕಾರ್ಯಾಗಾರಕ್ಕೆ ಆಗಮಿಸುವ ಪತ್ರಕರ್ತರು ಮುಂಚಿತವಾಗಿ ತಿಳಿಸಿದರೆ ಅವರಿಗೆ ಆಸನದ ವ್ಯವಸ್ಥೆ ಮಾಡಲಾಗುವುದು ಎಂದರು.
ಅಂತರಾಷ್ಟ್ರೀಯ ಪತ್ರಕರ್ತರ ಕಾರ್ಯಾಗಾರದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೆರಿಸಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗಮಿಸಲಿದ್ದಾರೆ ಎಂದರು.
ವಿಶೇಷ ಅತಿಥಿಗಳಾಗಿ ಪಬ್ಲಿಕ್ ಟಿವಿ ಮುಖ್ಯ ಸಂಪಾದಕರಾದ ಎಚ್.ಆರ್.ರಂಗನಾಥ, ಶ್ರೀಲಂಕಾ ಮಾಜಿ ಕ್ರಿಕೆಟಿಗ್, ಶ್ರೀಲಂಕಾ ಪ್ರವಾಸೋದ್ಯಮ ಇಲಾಖೆಯ ರಾಯಬಾರಿ ಸನತ್ ಜಯಸೂರ್ಯ ಆಗಮಿಸಲಿದ್ದಾರೆ. ಕಾರ್ಯಾಗಾರದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಳಗಾವಿಯ ಗೌರವ ಅಧ್ಯಕ್ಷ ಡಾ. ಭೀಮಶಿ ಜಾರಕಿಹೊಳಿ ವಹಿಸಲಿದ್ದಾರೆ.
ಅತಿಥಿಗಳಾಗಿ ಖ್ಯಾತ ಉದ್ಯಮಿ ಸಂಜಯ ಘೋಡಾವತ್, ಶ್ರೀಲಂಕಾ ಪ್ರವಾಸೋದ್ಯಮ ಸಚಿವ ಭಾವನೆಕಾ ಹೇರತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಬಿ.ವಿ.ಮಲ್ಲಿಕಾರ್ಜುನಯ್ಯ ಸೇರಿದಂತೆ ಇನ್ನಿತರರು ಆಗಮಿಸಲಿದ್ದಾರೆ ಎಂದರು.-
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಭೀಮಶಿ ಜಾರಕಿಹೊಳಿ, ಸಂಘದ ಪದಾಧಿಕಾರಿಗಳಾದ ಶ್ರೀಶೈಲ ಮಠದ, ಮಂಜುನಾಥ ಪಾಟೀಲ, ನೌಶಾದ ವಿಜಾಪುರ, ಶ್ರೀಕಾಂತ ಕುಬಕಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು./////