15 ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು 15 ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನರ, ತುಮಕೂರು, ಕೊಪ್ಪಳ, ಮಂಗಳೂರು, ಹಾವೇರಿ, ಉಡುಪಿ ಸೇರಿ ರಾಜ್ಯದ ಒಟ್ಟು 57 ಕಡೆ ದಾಳಿ ನಡೆಸಿದ್ದಾರೆ.
ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ದಾಳಿ ನಡೆದಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತರ ಅಧಿಕಾರಿಗಳು ಪರಿಶೀಲನೆ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.//////