Belagavi News In Kannada | News Belgaum

ರೈಲು ದುರಂತ: ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ, ಪರಿಶೀಲನೆ

 ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಎಕ್ಸ್‌ಪ್ರೆಸ್ ರೈಲು ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ  300ಕ್ಕೆ ಏರಿಕೆ

ಒಡಿಶಾ:  ಒಡಿಶಾದ ಬಾಲಸೋರ್‌ ನ ಬಹನಾಗ ರೈಲ್ವೆ ನಿಲ್ದಾಣದ್ಲಿ  ಸಂಭವಿಸಿದ ರೈಲು ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾಲಸೋರ್ ನ ಬಹನಾಗದಲ್ಲಿನ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ  ಭೇಟಿ ನೀಡಿ ರೈಲ್ಚೆ ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದರು.  ಬಳಿಕ ಕಟಕ್ ಆಸ್ಪತ್ರೆಗೆ  ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ತೆರಳುತ್ತಿದ್ದು, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.//////