Belagavi News In Kannada | News Belgaum

ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿಗೆ ಜೂ.9 ರಿಂದ ಸಭೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಎರಡನೇಯ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿಯನ್ನು ನಿಗದಿಪಡಿಸಲು ಜೂನ್ 9 ರಿಂದ ಜೂ.21 2023 ರವರೆಗೆ ತಾಲ್ಲೂಕುವಾರು ಸಭೆಗಳನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಸಭೆಯ ದಿನಾಂಕ-ಸಮಯದ ವಿವರ:

ಅಥಣಿ – ಜೂನ್ 9 ರಂದು ಬೆಳಿಗ್ಗೆ 10 ಗಂಟೆಗೆ
ಕಾಗವಾಡ – ಜೂನ್ 9 ರಂದು ಮಧ್ಯಾಹ್ನ 3 ಗಂಟೆಗೆ
ರಾಯಬಾಗ – ಜೂನ್ 12ರಂದು ಬೆಳಿಗ್ಗೆ 10 ಗಂಟೆಗೆ
ಮೂಡಲಗಿ – ಜೂನ್ 12 ರಂದು ಮಧ್ಯಾಹ್ನ 3 ಗಂಟೆಗೆ
ಗೋಕಾಕ – ಜೂನ್ 15ರಂದು ಬೆಳಿಗ್ಗೆ 10 ಗಂಟೆಗೆ
ಹುಕ್ಕೇರಿ – ಜೂನ್ 15ರಂದು ಮಧ್ಯಾಹ್ನ 3 ಗಂಟೆಗೆ
ಬೈಲಹೊಂಗಲ – ಜೂನ್ 16 ರಂದು ಬೆಳಗ್ಗೆ 10 ಗಂಟೆಗೆ
ಸವದತ್ತಿ – ಜೂನ್ 16 ರಂದು ಮಧ್ಯಾಹ್ನ 3 ಗಂಟೆಗೆ
ಯರಗಟ್ಟಿ – ಜೂನ್ 17ರಂದು ಬೆಳಿಗ್ಗೆ 10 ಗಂಟೆಗೆ
ರಾಮದುರ್ಗ – ಜೂನ್ 17ರಂದು ಮಧ್ಯಾಹ್ನ 3 ಗಂಟೆಗೆ
ಖಾನಾಪೂರ – ಜೂನ್ 19ರಂದು ಬೆಳಿಗ್ಗೆ 10 ಗಂಟೆಗೆ
ಕಿತ್ತೂರ – ಜೂನ್ 19ರಂದು ಮಧ್ಯಾಹ್ನ 3 ಗಂಟೆಗೆ
ಬೆಳಗಾವಿ – ಜೂನ್ 20ರಂದು ಬೆಳಗ್ಗೆ 10 ಗಂಟೆಗೆ
ನಿಪ್ಪಾಣಿ – ಜೂನ್ 21ರಂದು ಬೆಳಗ್ಗೆ 10 ಗಂಟೆಗೆ
ಚಿಕ್ಕೋಡಿ – ಜೂನ್ 21ರಂದು ಮಧ್ಯಾಹ್ನ 3 ಗಂಟೆಗೆ