Belagavi News In Kannada | News Belgaum

ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆಗೆ ಶರಣು

ಧಾರವಾಡ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ  ನಡೆದಿದೆ.

ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ./////