ಗೃಹಲಕ್ಷ್ಮಿ ಯೋಜನೆಯಲ್ಲಿ ಗೊಂದಲ ಇಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆಯೊಡತಿಗೆ 2000 ರೂ ಮಾಸಿಕ ಧನ ನೀಡುವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಬಿಪಿಎಲ್ ಕಾರ್ಡ್ ಇಲ್ಲದ ಮಹಿಳೆಯರಿಗೂ ಯೋಜನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಂಗಳೂರಿನ ಶಕ್ತಿ ಭವನದಲ್ಲಿ ನಡೆದ ಉನ್ನತ ಮಟ್ಟದ ಸಭೆ ಬಳಿಕ ಮಾತನಾಡಿದ ಸಚಿವರು, ಆನ್ ಲೈನ್ ಹಾಗೂ ನಾಡಕಚೇರಿಯಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ವೋಟರ್ ಐಡಿ ಸಂಖ್ಯೆ ಬೇಡ ಎಂದು ಸಿಎಂ ಹೇಳಿದ್ದಾರೆ ಎಂದರು.
ಪತಿ, ಪತ್ನಿ ಇಬ್ಬರಲ್ಲಿ ಒಬ್ಬರು ತೆರಿಗೆ ಪಾವತಿದಾರರಾದರೂ ಆ ಕುಟುಂಬಕ್ಕೆ ಗೃಹಲಕ್ಷ್ಮಿ ಯೋಜನೆ ಅನ್ವಯವಾಗುವುದಿಲ್ಲ ಎಂದು ಹೇಳಿದರು.//////