ವಿದ್ಯುತ್ ತಂತಿ ಸರಿಪಡಿಸಲು ಹೋಗಿ ಲೈನ್‍ಮ್ಯಾನ್ ಸಾವು

ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ತಗುಲಿ ಲೈನ್‌ಮ್ಯಾನ್ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬೇಲೂರಿನಲ್ಲಿ ನಡೆದಿದೆ.
ಶಿಬಾರಗಟ್ಟಿ ಗ್ರಾಮದ ನಿಜಗುಣಿ ಗಿರಿಯಪ್ಪನವರ (28) ಮೃತಪಟ್ಟ ಲೈನ್‌ಮ್ಯಾನ್. ಇಂದು ಬೇಲೂರಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಿಜಗುಣಿ ಅವರಿಗೆ ವಿದ್ಯುತ್ ತಗುಲಿ ಸಾವಿಗೀಡಾಗಿದ್ದಾರೆ. ಸದ್ಯ ನಿಜಗುಣಿ ಅವರ ಶವವನ್ನು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ./////