SSLC ಮಕ್ಕಳಿಗೆ ಸಿಹಿ ಸುದ್ದಿ: ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಗ್ರಿನ್ ಸಿಗ್ನಲ್

ಬೆಂಗಳೂರು : ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಪರೀಕ್ಷಾ ಸಮಯದಲ್ಲಿ ಉಚಿತವಾಗಿ ಪ್ರಯಾಣಿಸಲು ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಅವಕಾಶ ನೀಡಿದೆ.
ಜೂನ್ 12 ರಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಆರಂಭವಾಗಲಿದ್ದು, ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.
ಜೂನ್ 12 ರಿಂದ 19 ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ಪರೀಕ್ಷಾ ಕೇಂದ್ರಗಳಿಂದ ಮನೆಗೆ ವಾಪಸ್ ತೆರಳುವಾಗ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ಪ್ರಯಾಣಿಸಬಹುದಾಗಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುವಾಗ ಎಸ್‌ಎಸ್‌ಎಲ್ಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ, ಸಾರಿಗೆ ಸಂಸ್ಥೆಯ ಬಿಎಂಟಿಸಿ ಹಾಗೂ ಕೆಎಸ್‌ಆರ್ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಜೂನ್ 12 ರಿಂದ ಜೂನ್ 19 ರವರಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದೆ.///////