Belagavi News In Kannada | News Belgaum

ಜನರ ಮೆಚ್ಚುಗೆಗೆ ಪಾತ್ರವಾದ ಫೋನ್ ಇನ್ ಕಾರ್ಯಕ್ರಮ

ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ತಂಡ ನಡೆಸುತ್ತಿರುವ 13ನೇ ಫೋನ್ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಬೆಳಗಾವಿ ನಗರ ಪೊಲೀಸ್ ಇಲಾಖೆಯ ಡಿಸಿಪಿ ನೇತೃತ್ವದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಜನರು ಕರೆ ಮಾಡಿ ತಮ್ಮ ಸಮಸ್ಯೆ ಹೇಳಿಕೊಂಡು ಪರಿಹಾರ ಕಂಡುಕೊಂಡರು.
ಸಾರ್ವಜನಿಕರ ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿ‌ ನಿತೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಡಾ. ಸಂಜೀವ ಪಾಟೀಲ, ಡಿಸಿಪಿ ಶೇಖರ್ ಎಸ್.ಟಿ. ನಯನವಾಗಿಯೇ ಕರೆಗಳನ್ನು ಸ್ವೀಕರಿಸಿ ನಮಸ್ಕಾರ್ರೀ ನಾನು ಜಿಲ್ಲಾಧಿಕಾರಿ, ಎಸ್ಪಿ,‌ ಡಿಸಿಪಿ ಮಾತನಾಡೋದು ಮಾತನಾಡುವುದು ಏನಿದೆ ನಿಮ್ಮ ಸಮಸ್ಯೆ ಎಂದು ಜನರ ಸಮಸ್ಯೆ ಆಲಿಸಿದರು.
ಬೆಳಗಾವಿ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ನಗರ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಸಾರ್ವಜನಿಕರು ದೂರವಾಣಿ ಕರೆ ಮಾಡಿ ಸಮಸ್ಯೆ ಹೇಳಿಕೊಂಡರು.
ನಗರದ ವ್ಯಕ್ತಿಯೊರ್ವ ಕರೆ ಮಾಡಿ ಮಹಾನಗರ ಪಾಲಿಕೆಯ ಸಮುದಾಯದ ಭವನ ನಿರ್ಮಾಣದಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ. ಅದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ದೂರಿದರು. ಇದಕ್ಕೆ ಸ್ಪಂದಿಸಿದ ಡಿಸಿ ಪಾಲಿಕೆಯ ಆಯುಕ್ತರು ಇಲ್ಲಿಯೇ ಇದ್ದಾರೆ ಅವರಿಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಥಣಿಯ ತಾಲೂಕಿನ ವ್ಯಕ್ತಿಯೊರ್ವ ಕರೆ ಮಾಡಿ ಅಥಣಿಯ ಕೆಲ ಕಡೆಗಳಲ್ಲಿ ನಾಲ್ಕು ಜನರು ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಅವರಿಗೆ ದೂರಿದರು. ಇದಕ್ಕೆ ಸ್ಪಂದಿಸಿದ ಎಸ್ಪಿ ಸಂಬಂಧಿಸಿದ ಪೊಲೀಸ್ ಠಾಣೆಗೆ ಹೋಗಿ ತತಕ್ಷಣ ಬಂದ್ ಮಾಡಲಾಗುವುದು ಎಂದರು.
ಮೂಡಲಗಿ ತಾಲೂಕಿನ‌ ವ್ಯಕ್ತಿಯೊರ್ವ ಕರೆ ಮಾಡಿ, ಕೆಲವರು ನಮ್ಮ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ದೂರಿದರು. ನಿಮ್ಮ ಜಮೀನಿನ ಸುತ್ತಲೂ ಕಪೌಂಡ ಕಟ್ಟಿಕೊಂಡು ಬಿಡಿ ಯಾವ ಸಮಸ್ಯೆಯೂ ಬರುವುದಿಲ್ಲ ಎಂದು ತಿಳಿಸಿದರು.
ಅಥಣಿ ತಾಲೂಕಿನ ಹನುಮಾಪುರ ಗ್ರಾಮದಲ್ಲಿನ ತೋಟದಲ್ಲಿನ ರಸ್ತೆ ಶಾಲೆಗೆ ಹೋಗುತ್ತದೆ‌. ಹೊಸ ನಕ್ಷೆಯ ಮೂಲಕ ರಸ್ತೆ ಇಲ್ಲ ಎಂದು ತೋರಿಸಿದೆ. ಈಗ ಜಮೀನು ಮಾಲೀಕರು ಆ ರಸ್ತೆಯನ್ನು ಬಂದ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ದೂರಿದರು. ಇದಕ್ಕೆ ಸ್ಪಂದಿಸಿದ ಡಿಸಿ ಅವರು, ನಕ್ಷೆಯಲ್ಲಿ ರಸ್ತೆ ಇದೆಯೋ ಇಲ್ಲವೋ ಎಂಬುದನ್ನು ತಪಾಸಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಿರೇಬಾಗೇವಾಡಿ ಗ್ರಾಮದ ವ್ಯಕ್ತಿಯೊರ್ವ ಕರೆ ಮಾಡಿ ಮೊಬೈಲ್ ಕಳ್ಳತವಾಗಿದೆ. ಇಲ್ಲಿಯವರೆಗೂ ಯಾರೊಬ್ಬರು ಸ್ಪಂದಿಸಿಲ್ಲ ಎಂದು ದೂರಿದರು. ಇದಕ್ಕೆ ಸ್ಪಂದಿಸಿದ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಶೇಖರ ಎಸ್.ಟಿ. ಠಾಣೆಯಿಂದ ನಿಮಗೆ ರಸೀದಿ ನೀಡಿದ್ದರೆ ಪೊಲೀಸ್ ಠಾಣೆಗೆ ತಿಳಿಸಿ ನಿಮ್ಮ ಸಮಸ್ಯೆ ಬಗೆ ಹರಿಸಲಾಗುವುದು ಎಂದರು.
ಸ್ಮಾರ್ಟ್ ಸಿಟಿಯಾದರೂ ಬೆಳಗಾವಿ ಟಿಳಕವಾಡಿ ಕಲಾಮಂದಿರದಲ್ಲಿ ತಡೆಯಾಜ್ಞೆ ಇದ್ದರೂ ಕಾಮಗಾರಿ ಪ್ರಾರಂಭ ಮಾಡಿದ್ದಾರೆ ಎಂದು ವ್ಯಕ್ತಿಯೊರ್ವವರು ಕರೆ ಮಾಡಿ ಇದು ನ್ಯಾಯಾಲಯದಲ್ಲಿದೆ ಅದರ ಆದೇಶ ಆಗುತ್ತದೆಯೋ ಅದನ್ನು ಪಾಲಿಸಲು ಸ್ಮಾರ್ಟ್ ಸಿಟಿ ಅವರಿಗೆ ತಿಳಿಸಲಾಗಿವುದು ಎಂದು ಡಿಸಿ ತಿಳಿಸಿದರು.
ಧಾರವಾಡ ಜಿಲ್ಲೆಯ ನ್ಯಾಯವಾದಿಯೊಬ್ಬರು ಕರೆ ಮಾಡಿ ಅಥಣಿ ಮಹಿಳಾ ಕೋ ಆಪರೇಟಿವ್ ಸೊಸೈಟಿ ಸೇರಿದಂತೆ ಎರಡೂ ಸೊಸೈಟಿಯಿಂದ ಠೇವಣಿ ಇಟ್ಟ ಹಣ ಮರಳಿ ಕೊಡುತ್ತಿಲ್ಲ. ಸಾಕಷ್ಟು ತೊಂದರೆಯಾಗುತ್ತಿದೆ. ನಮ್ಮ ಹಣ ಮರಳಿ ಕೊಡಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಎಸ್ಪಿ ಸಂಜೀವ ಪಾಟೀಲ ಆದಷ್ಟು ಬೇಗ ನಿಮ್ಮ ಸಮಸ್ಯೆ ಬಗೆ ಹರಿಸಿಕೊಡಲಾಗುವುದು ಎಂದರು.
2022ರಲ್ಲಿ 10 ತೋಲೆ ಬಂಗಾರ ಮಾರ್ಕೇಟ್ ಹಾಗೂ ಪೊಲೀಸ್ ಠಾಣೆ ನಡುವೆ ಕಳ್ಳತನವಾಗಿದೆ. ದೂರು ನೀಡಿದರೂ ಇಲ್ಲಿಯವರೆಗೂ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆಯೊಬ್ಬರು ದೂರಿದರು. ಇದಕ್ಕೆ ಸ್ಪಂದಿಸಿದ ಡಿಸಿಪಿ ಶೇಖರ್ ಎಸ್.ಟಿ. ಆದಷ್ಟು ಬೇಗ ನಿಮ್ಮ ಸಮಸ್ಯೆ ಬಗೆ ಹರಿಸುವುದಾಗಿ ತಿಳಿಸಿದರು.
ಸವದತ್ತಿ ತಾಲೂಕಿನ ಗುತ್ತಿಗೆಯಾದಾರದ ಮೇಲೆ 2021 ಹಾಗೂ 2022 ರಲ್ಲಿ ಪೌರಕಾರ್ಮಿಕರ ನಿಯುಕ್ತಿ ಮಾಡಿಕೊಂಡಿದ್ದಾರೆ. ಅವರ ಪಿಎಫ್ ಐ ನೀಡಿಲ್ಲ ಎಂದು ದೂರಿದರು. ಇದಕ್ಕೆ ಸ್ಪಂದಿಸಿದ ಎಸ್ಪಿ ಸಂಜೀವ ಪಾಟೀಲ ಸಂಬಂಧಿಸಿದವರಿಗೆ ತಿಳಿಸಿ ಸಮಸ್ಯೆ ಬಗೆ ಹರಿಸಲಾಗುವುದು ಎಂದರು.
ಬೆಳಗಾವಿ ತಾಲೂಕಿನ ನಾವಗೆಯಲ್ಲಿ ದಸರಾದಂದು ನಮ್ಮ ಮಗಳ ಕೊಲೆಯಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಇಲ್ಲಿಯವರೆಗೆ ತನಿಖೆ ಮಾಡುತ್ತಿಲ್ಲ ಎಂದು ವ್ಯಕ್ತಿಯೊರ್ವ ಕರೆ ಮಾಡಿ ದೂರಿದರು. ಇದಕ್ಕೆ ಸ್ಪಂದಿಸಿದ ಡಿಸಿಪಿ ಶೇಖರ ಎಸ್ ಟಿ, ಮಾರಿಹಾಳ ಸಿಪಿಐ ಹಾಗೂ ಎಸಿಪಿಗೆ ತಿಳಿದಿ ತನಿಖೆ ನಡೆಸಲು ಸೂಚಿಸಲಾಗುವುದು ಎಂದರು.
ಅಥಣಿ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವಿನಾಕಾರಣ ಹೆಚ್ಚಿ‌ನ ಡೋನೇಷನ್ ಪಡೆಯುತ್ತಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ವ್ಯಕ್ತಿಯೊರ್ವ ದೂರಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಮೊದಲು ಬಂದು ಪೋಷಕರು ದೂರು ನೀಡಿದರೆ ಆಯಾ ಶಿಕ್ಷಣ ಸಂಸ್ಥೆಯ ವಿರುದ್ಧ ಮುಲ್ಲಾಜಿಲ್ಲದೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ನಗರದಲ್ಲಿನ ಸಂಚಾರ ಸಮಸ್ಯೆ, ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆ, ಕೌಟುಂಬಿಕ ಕಲಹ, ತಾಲೂಕಿನಲ್ಲಿ‌ ಸ್ಮಶಾನ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಹೊತ್ತು ಜನರು ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಹಾಗೂ ನಗರ ಪೊಲೀಸ್ ಇಲಾಖೆಯ ಡಿಸಿಪಿ ಅವರಿಗೆ ಕರೆ ಮಾಡಿ ದೂರು ನೀಡಿ ಸಮಸ್ಯೆಗೆ ಪರಿಹಾರ ಕಂಡುಕೊಂಡರು.
ರಾಯಬಾಗ ತಾಲೂಕಿನ ಮೊರಬ ಗ್ರಾಮದ ವ್ಯಕ್ತಿಯೊರ್ವ ಕರೆ ಮಾಡಿ, ಯೂಟ್ಯೂಬ್ ಚಾನಲ್ ನ ಹೆಸರು ಹೇಳಿಕೊಂಡು ಜನರಿಗೆ ತೊಂದರೆ ಕೊಡುತ್ತಿದ್ದಾರೆ. ಅಲ್ಲದೆ ವಿಡಿಯೋ ಮಾಡಿ ಬ್ಲ್ಯಾಕ್ ಮೆಲ್ ಮಾಡುತ್ತಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ದೂರಿದರು. ಇದಕ್ಕೆ ಉತ್ತರಿಸಿದ ಎಸ್ಪಿ ಸಂಜೀವ ಪಾಟೀಲ, ಯೂಟ್ಯೂಬ್ ಚಾನಲ್ ಹೆಸರು ಹೇಳಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ, ಬ್ಲ್ಯಾಕ್ ಮೆಲ್ ಮಾಡಿದರೆ ಅಂಥವರ ವಿರುದ್ಧ ದೂರು ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಪೊಲೀಸ್ ಇನಸ್ಪೆಕ್ಟರ್‌ಗಳಾದ ಬಿ.ಆರ್.ಗಡ್ಡೇಕರ, ಮಹಾದೇವ ಎಸ್.ಎಂ. ಬಾಳಪ್ಪ ತಳವಾರ, ವಿಠ್ಠಲ ಮಾದರ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಕಂದಾಯ ಅಧಿಕಾರಿಗಳು, ನಗರ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು./////