ಸಿಎಂ , ಡಿಸಿಎಂ ಭೇಟಿಯಾದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು : ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಅವರು ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬೆಂಗಳೂರಿನ ಕುಮಾರಕೃಪಾದಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಇದಕ್ಕೂ ಮುನ್ನಾ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗದ ನಿವಾಸಕ್ಕೆಆಗಮಿಸಿದ ರೇಣುಕಾಚಾರ್ಯ, ಡಿ.ಕೆ.ಶಿವಕುಮಾರ್ ಅವರಿಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಅಭಿನಂದಿಸಲು ಬಂದಿದ್ದೇನೆ ಎಂದು ಹೇಳಿದ್ದಾರೆ./////