Belagavi News In Kannada | News Belgaum

ಮಾಧ್ಯಮ ಪ್ರತಿನಿಧಿಗಳಿಗೆ ಮೀಡಿಯಾ ಕಿಟ್ ವಿತರಣೆ / ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ನಿಪ್ಪಾಣಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಬೆಳಗಾವಿ, ಜೂ.15 : ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನ ವ್ಯಾಪ್ತಿಯಲ್ಲಿ ಬರುವ ಗ್ರಾಮ/ಪಟ್ಟಣ ಪಂಚಾಯತ/ನಗರಗಳಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಹಾಗೂ 68 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂ.13 2023 ರಿಂದ ಜು. 13 2023 ಕೊನೆಯ ದಿನಾಂಕ ಆಗಿರುತ್ತದೆ. ಖಾಲಿ ಇರುವ ಗ್ರಾಮೀಣ ಪ್ರದೇಶಗಳಲ್ಲಿ ಅದೇ ಗ್ರಾಮದ ಅಭ್ಯರ್ಥಿಗಳು ಹಾಗೂ ಪಟ್ಟಣ ಪಂಚಾಯತ ನಗರ ಪ್ರದೇಶಗಳಲ್ಲಿ ಅದೇ ವಾರ್ಡಿನ ಇಚ್ಚೆಯುಳ್ಳ ಅಭ್ಯರ್ಥಿಗಳು ಎಲ್ಲಾ ದಾಖಲಾತಿಗಳನ್ನೊಳಗೊಂಡು ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನಿಪ್ಪಾಣಿ ಈ ಕಚೇರಿಗೆ ಖುದ್ದಾಗಿ ಆಫ್‍ಲೈನ್‍ನಲ್ಲಿ (ಭೌತಿಕವಾಗಿ) ಅರ್ಜಿಗಳನ್ನು ಪೆಟ್ಟಿಗೆಯಲ್ಲಿ ಹಾಕಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ನಿಪ್ಪಾಣಿ ಹಾಗೂ ದೂರವಾಣಿ ಸಂಖ್ಯೆ 08338-222523 ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಅಂಕಾಕ/ಅಂಸ ನಿಪ್ಪಾಣಿ ಆಯ್ಕೆ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

 

ಅರಿವು ಯೋಜನೆಯಡಿಯಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

 

ಬೆಳಗಾವಿ, ಜೂ.15 : 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ CET/NEET ನಲ್ಲಿ ಆಯ್ಕೆಯಾಗುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರಿವು ಸಾಲ ಯೋಜನೆಯಲ್ಲಿ, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಜೈನ, ಕ್ರಿಶ್ಚಿಯನ್, ಬೌದ್ಧ, ಸಿಖ್ಖರು, ಪಾರ್ಸಿ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.
ಯೋಜನೆಯಲ್ಲಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ ಮುಖಾಂತರ kmdconline.karnataka.gov.in ಈ ವೆಬ್ ಸೈಟ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಸಕ್ತ ವಿದ್ಯಾರ್ಥಿಗಳು ಜೂ.13 2023 ರಿಂದ ಜುಲೈ.10 2023 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಮೌಲಾನಾ ಆಝಾದ ಅಲ್ಪಸಂಖ್ಯಾತರ ಭವನ, ಕೆ.ಎಸ್.ಸಿ.ಎ. ಕ್ರಿಕೇಟ್ ಕ್ರೀಡಾಂಗಣ ಎದುರುಗಡೆ, ರಾಮತೀರ್ಥ ನಗರ, ಬೆಳಗಾವಿ- 590016 ಕಚೇರಿಗೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 0831-2950794 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆ ಜೂ.17 ರಂದು

 

ಬೆಳಗಾವಿ, ಜೂ.15 : ಬೆಳಗಾವಿ ಕಛೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ” ಸಭೆ ಹಾಗೂ “ವಿದ್ಯುತ್ ಸುರಕ್ಷತಾ ದಿನ”ವನ್ನು ನಡೆಸುವ ಬಗ್ಗೆ ಕೆ.ಇ.ಆರ್ಸಿ. ಹಾಗೂ ಹೆಸ್ಕಾಂ ರವರ ನಿರ್ದೇಶನಗಳ ಮೇರೆಗೆ ಅಧೀಕ್ಷಕ ಇಂಜನಿಯರ, ಕಾರ್ಯ ಮತ್ತು ಪಾಲನೆ ವೃತ್ತ ಕಛೇರಿ, ಹುವಿಸಕಂನಿ., ಬೆಳಗಾವಿರವರ ಅಧ್ಯಕ್ಷತೆಯಲ್ಲಿ ಶನಿವಾರ (ಜೂ.17) ರಂದು ಮುಂಜಾನೆ 10 30 ಕ್ಕೆ ಆಯೋಜಿಸಲಾಗಿದೆ.

ವಿದ್ಯುತ್ ಗ್ರಾಹಕರು ತಮ್ಮ ಸಮಸ್ಯೆ ಕುಂದು-ಕೊರತೆಗಳನ್ನು ಹಾಗೂ “ವಿದ್ಯುತ್ ಸುರಕ್ಷತಾ ದಿನ”ವನ್ನು ನಡೆಸಲಾಗುವುದು ಆದ್ದರಿಂದ ಸದರಿ ಸಭೆಯಲ್ಲಿ ಸಾರ್ವಜನಿಕರು ಭಾಗವಹಿಸಬುದಾಗಿದೆ ಎಂದು ಬೆಳಗಾವಿ ನಂ-3, ಹುವಿಸಕಂನಿ, ಕಾ&ಪಾ ನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.///

ಪರಿಶಿಷ್ಟ ಪಂಗಡದ ಕಾನೂನು ಪದವಿಧರರಿಗೆ ಅರ್ಜಿ ಆಹ್ವಾನ

 

ಬೆಳಗಾವಿ, ಜೂ.15 : 2023-24ನೇ ಸಾಲಿಗೆ ಬೆಳಗಾವಿ ಜಿಲ್ಲೆಯ ಪರಿಶಿಷ್ಟ ಪಂಗಡದ ಕಾನೂನು ಪದವಿಧರರಿಗೆ ಆಡಳಿತ ನ್ಯಾಯಾಧಿಕರಣದಲ್ಲಿ ತರಬೇತಿ ನೀಡುಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಹಾಗೂ ವಕೀಲ ವೃತ್ತಿ ನಡೆಸಲು ಅರ್ಹತೆಯುಳ್ಳ ಕಾನೂನು ಪದವೀಧರರು ಮಾತ್ರ ಈ ತರಬೇತಿಗೆ ಅರ್ಹರು, ತರಬೇತಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವದು, ಮಹಿಳಾ ಅಭ್ಯರ್ಥಿಗಳಿಗೆ ಆಧ್ಯತೆ ನೀಡಲಾಗುವದು.
ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ ದಂದು ಅಭ್ಯರ್ಥಿಯ ವಯಸ್ಸು 40 ವರ್ಷಗಳನ್ನು ಮೀರಿರಬಾರದು ಈ ಕುರಿತು ಅಧಿಕೃತ ಪ್ರಮಾಣ ಪತ್ರವನ್ನು ಲಗತ್ತಿಸಬೇಕು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ವರ್ಷಗಳ ವರೆಗೆ ಮಾಹೆಯಾನರೂ. 10 ಸಾವಿರ ತರಬೇತಿ ಭತ್ಯೆ ನೀಡಲಾಗುವುದು. ತರಬೇತಿಯನ್ನು ಮಧ್ಯದಲ್ಲಿ ಬಿಟ್ಟು ಹೋಗಬಾರದು. ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಉದ್ಯೋಗ ದೊರೆತಲ್ಲಿ ಈ ನಿಬಂಧನೆ ಅನ್ವಯವಾಗುವದಿಲ್ಲ, ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಸರ್ಕಾರಿ ವಕೀಲರು ಅಥವಾ 20 ವರ್ಷಗಳಿಗಿಂತ ಕಡಿಮೆ ಇಲ್ಲದ ವಕೀಲ ವೃತ್ತಿಯಲಿ ಅನುಭವವಿರುವ ಖಾಸಗಿ ಹಿರಿಯ ವಕೀಲರಲ್ಲಿ ತರಬೇತಿ ಪಡೆಯಲು ನಿಯೋಜಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಯು ಸರ್ಕಾರದ ಎಲ್ಲ ನಿಭಂದನೆಗೆ ಬಧ್ಧನಾಗಿರುತ್ತೇನೆ ಎಂದು 20 ರೂ.ಗಳ ಛಾಪಾಕಾಗದದ ಮೇಲೆ ಮುಚ್ಚಳಿಕೆ ಯನ್ನು ಬರೆದುಕೊಡತಕ್ಕದು,ಆಯ್ಕೆಯಾದ ಅಭ್ಯರ್ಥಿಯು ಸುಳ್ಳು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ಒದಗಿಸಿದಲ್ಲಿ ಶಿಕ್ಷೆಗೊಳಪಡುವುದಲ್ಲದೆ ಅವನು ಪಡೆದುಕೊಂಡ ತರಬೇತಿ ಭತ್ಯೆಯ ಪೂರ್ತಿ ಹಣವನ್ನು ವಾರ್ಷಿಕ ಶೇ. 10 ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು. ಒಂದು ವೇಳೆ ಬಾಕಿ ವಸೂಲಿ ಉಳಿದಲ್ಲಿ ಭೂಕಂದಾಯ ಬಾಕಿ ನಿಯಮಾವಳಿ ಅನ್ವಯ ವಸೂಲ ಮಾಡಲಾಗುವುದು.

ಅಭ್ಯರ್ಥಿಗಳು ಅರ್ಜಿಯನ್ನು ಆನ್‍ಲೈನ್ ಮೂಲಕ ಜೂ.15 2023 ರಿಂದ ಜೂ. 22 2023 ರ ವರೆಗೆ ಣತಿ.ಞಚಿಡಿ.ಟಿiಛಿ.iಟಿ ರಲ್ಲಿ ಅರ್ಜಿ ಸಲ್ಲಿಸಬಹುದು, ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿಗಳಿಗೆ ಸಲ್ಲಿಸುವುದು, ನಿಗಧಿತ ಅರ್ಜಿಯೊಂದಿಗೆ ಅವಶ್ಯಕ ಮಾಹಿತಿಗಳಾದ ಪದವಿ ಪರೀಕ್ಷೆ ಹಾಗೂ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ಕಾನೂನು ಪರೀಕ್ಷೆಗಳ ದೃಢಿಕೃತ ಅಂಕಪಟ್ಟಿ ಮತ್ತು ತೇರ್ಗಡೆ ಹೊಂದಿದ ಪ್ರಮಾಣ ಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರ ಅಥವಾ ಟಿ. ಸಿ. ಮತ್ತು ಬಾರ್ ಅಸೋಶಿಯೇಶನದಲ್ಲಿ ಸದಸ್ಯತ್ವ ಪಡೆದ ಬಗ್ಗೆ ಪ್ರಮಾಣ ಪತ್ರ ಲಗತ್ತಿಸಬೇಕು ಎಂದು ಬೆಳಗಾವಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ///

ಬೆಳಗಾವಿಯಲ್ಲಿ ಉದ್ಯೋಗ ಮೇಳ ಜೂ.19 ರಂದು

 

ಬೆಳಗಾವಿ, ಜೂ.15 : ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಬೆಳಗಾವಿ ಹಾಗೂ “ಬೆಂಗಳೂರು ಹೋಟೆಲ್ ಅಸೋಸಿಯೇಷನ್” ಆಶ್ರಯದಲ್ಲಿ, ಉದ್ಯೋಗ ಮೇಳವನ್ನು ಬೆಳಗಾವಿಯ ಶಿವಬಸವ ನಗರದ “ಶ್ರೀ ಸಿದ್ಧರಾಮೇಶ್ವರ ಟ್ರಸ್ಟ್‍ನ ಕೈಗಾರಿಕಾ ತರಬೇತಿ ಕೇಂದ್ರ,ದಲ್ಲಿ ಜೂ.19 2023 ರಂದು 9 30 ಗಂಟೆಗೆ ಆಯೋಜಿಸಲಾಗಿದೆ.
ಸದರಿ ನೇಮಕಾತಿಯಲ್ಲಿ ಸ್ಟೀವರ್ಡ, ಕ್ಯಾಪ್ಟನ್, ಅಡುಗೆ ಸಹಾಯಕ, ಬಾಣಸಿಗ, ಮಾಣಿ ಹಾಗೂ ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ ನಡೆಯಲಿವೆ.
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ., ಡಿಪೆÇ್ಲೀಮಾ ಪಾಸ್/ಫೇಲ್ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು http://tinyurl.com/ksdcjobdrive ವೆಬ್‍ಸೈಟ್‍ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಗಳನ್ನು ಸಲ್ಲಿಸಬುದಾಗಿದೆ.

ಹೆಚ್ಚಿನ ಮಾಹಿತಿಗಳಿಗಾಗಿ ಜಿ.ಕೌ.ಕ ಸಹಾಯಕ ನಿರ್ದೇಶಕರಾದ ಅರುಣಕುಮಾರ ಮಾಡೊಳ್ಳಿ, ಮೋ:7760919991 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.//

ಮಾಧ್ಯಮ ಪ್ರತಿನಿಧಿಗಳಿಗೆ ಮೀಡಿಯಾ ಕಿಟ್ ವಿತರಣೆ

 

ಬೆಳಗಾವಿ, ಜೂ.15 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮಾನ್ಯತಾ ಕಾರ್ಡ್ ಹೊಂದಿರುವ ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಸರಕಾರ ಕೊಡಮಾಡಿದ ಲ್ಯಾಪ್ ಟಾಪ್, ಡಿಎಸ್‍ಎಲ್‍ಆರ್ ಕ್ಯಾಮೆರಾ ಒಳಗೊಂಡಂತೆ ಮಾಧ್ಯಮ ಕಿಟ್ ಗಳನ್ನು ವಿತರಿಸಲಾಯಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಅವರು ನಗರದ ವಾರ್ತಾ ಭವನದಲ್ಲಿ ಗುರುವಾರ (ಜೂ.15) ಮಾಧ್ಯಮ ಕಿಟ್ ಗಳನ್ನು ವಿತರಿಸಿದರು.

ನಂತರ ಮಾತನಾಡಿದ ಅವರು, ಮಾಧ್ಯಮ ಪ್ರತಿನಿಧಿಗಳಿಗೆ ವೃತ್ತಿ ಕೌಶಲ ಹೆಚ್ಚಿಸಿಕೊಳ್ಳುವುದರ ಜತೆಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಅನುಕೂಲವಾಗುವಂತಹ ಪರಿಕರಗಳನ್ನು ಸರಕಾರ ನೀಡಿದೆ. ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಇಲಾಖೆಯ ಸಿಬ್ಬಂದಿ ಅನಂತ ಪಪ್ಪು, ಎಂ.ಎಲ್ ಜಮಾದಾರ ಸೇರಿದಂತೆ ಅನೇಕ ಮಾಧ್ಯಮ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.///