ಅನಗೋಳ ಕೆರೆ ಬಳಿ ವ್ಯಕ್ತಿಯ ಬರ್ಬರ ಹತ್ಯೆ..

ಬೆಳಗಾವಿ: ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಕೆರೆ ಹತ್ತಿರ ಶವ ಬಿಸಾಕಿ ಹೋಗಿರುವ ಘಟನೆ ನಗರದ ಅನಗೋಳದಲ್ಲಿ ನಡೆದಿದೆ..
ಅನಗೋಳದ ಹೊರ ವಲಯದ ಕೆರೆ ಹತ್ತಿರ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೃಷಿ ಕೆಲಸಕ್ಕೆ ಹೊರಟಿದ್ದ ರೈತರು ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಸಂಜಯ್ ತುಕಾರಾಮ್ ಪಾಟೀಲ (34) ಕೊಲೆಯಾದ ವ್ಯಕ್ತಿ..
ಕೆಲಸಕ್ಕೆ ಹೋಗಿ ಬರುವುದಾಗಿ ಮೊನ್ನೆ ಮನೆಯಿಂದ ಹೊರಬಂದಿದ್ದ ಸಂಜಯ್ ಪಾಟೀಲ ನಿನ್ನೆ ಮನೆಗೆ ಬರದಿರುವ ಹಿನ್ನೆಲೆ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಈಗ ಮೃತದೇಹ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಟಿಳಕವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಮೃತದೇಹ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಿದ್ದಾರೆ. ಇನ್ನು, ಯಾರು ಕೊಲೆ ಮಾಡಿದ್ದಾರೆ..? ಕೊಲೆ ಕಾರಣ ಏನು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ..