ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಪತಿ..

ಕನಕಪುರ: ನಡುರಸ್ತೆಯಲ್ಲೇ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಪತಿ ಕೊಲೆ ಮಾಡಿರುವ ಘಟನೆ ಕನಕಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಹೊಳೆಬೀದಿ ನೀಲಕಂಠೇಶ್ವರ ಬಡಾವಣೆಯ ನಿವಾಸಿ ಅಂಬಿಕಾ(30) ಕೊಲೆಯಾದ ಮಹಿಳೆಯಾಗಿದ್ದು ಈಕೆಯ ಪತಿ ಮುತ್ತ (38)ನನ್ನು ಪೊಲೀಸರು ಬಂಧಿಸಿದ್ದಾರೆ..
ಇಂದು ಮಧ್ಯಾಹ್ನ ಹೊಸಕೋಟೆ ಬಳಿಯ ಸುಜ್ಜಾದ್ರಿ ಹೋಟೆಲ್ ಬಳಿ ಈ ದುರ್ಘಟನೆ ನಡೆದಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು ಅವರ ಮುಂದೆಯೇ ಈ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ..
ದೊಣ್ಣೆ ಏಟಿನಿಂದ ತೀವ್ರವಾಗಿ ಗಾಯಗೊಂಡ ಅಂಬಿಕಾ ಸ್ಥಳದಲ್ಲೇ ಸಾವನ್ನಪ್ಪಿದ ನಂತರ ಶವದ ಬಳಿಯೇ ಆರೋಪಿ ಮುತ್ತ ಕೂತಿದ್ದ. ಇದನ್ನು ಕಂಡ ಜನರು ಬೆಚ್ಚಿಬಿದ್ದಿದ್ದು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು..
ಸ್ಥಳಕ್ಕೆ ದೌಡಾಯಿಸಿದ ಗ್ರಾಮಾಂತರ ಠಾಣೆ ಸಬ್ ಇನ್ಸ್‍ಪೆಕ್ಟರ್ ಮನೋಹರ್ ಮತ್ತು ಅವರ ಸಿಬ್ಬಂದಿ ಆರೋಪಿಯನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ..