ವಿದ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ : ಕುಲಪತಿ ಪ್ರೊ. ರಾಮಚಂದ್ರಗೌಡ

Belgaum ; ವಿದ್ಯೆ ಎನ್ನುವುದು ಯಾರದೋ ಸ್ವತ್ತಲ್ಲ, ಅದು ನಿರಂತರ ಪ್ರಯತ್ನ, ಪರಿಶ್ರಮ ಮತ್ತು ಧ್ಯಾನ, ಉಪಾಸನೆಯ ಮೂಲಕ ಒಲಿಸಿಕೊಳ್ಳಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ರಾಮಚಂದ್ರಗೌಡ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಸರಸ್ವತಿ ಮೂರ್ತಿಯನ್ನು ಅನಾವರಣಗೊಳಿಸಿ ಕುಲಪತಿ ಪ್ರೊ. ಎಂ. ರಾಮಚಂದ್ರಗೌಡ ಅವರು ಮಾತನಾಡಿದರು. ವಿದ್ಯೆ ಮಾತ್ರ ಮನುಷ್ಯನ ಎಲ್ಲಾ ಸಮಸ್ಯೆಗಳಿಗೆ ಪರಿಹಾರ. ಜ್ಞಾನ ಮನುಷ್ಯನನ್ನು ಪರಿಪೂರ್ಣದೆಡೆಗೆ ಕೊಂಡೊಯ್ಯುತ್ತದೆ . ವಿದ್ಯಾರ್ಥಿಗಳು ಜ್ಞಾನ ಸಂಪಾದನೆಯ ಕಡೆಗೆ ಹೆಚ್ಚು ಗಮನ ಕೊಡಬೇಕು ಎಂದರು.
ಕಾರ್ಯಕ್ರಮದಲ್ಲಿ ಕುಲಸಚಿವರಾದ ರಾಜಶ್ರೀ ಜೈನಾಪುರ, ಮೌಲ್ಯ ಮಾಪನ ಕುಲಸಚಿವರಾದ ಪ್ರೊ. ಶಿವಾನಂದ ಗೋರನಾಳೆ, ವಿತ್ತಾಧಿಕಾರಿ ಪ್ರೊ. ಎಸ್. ಬಿ.ಆಕಾಶ್, ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್. ಎಸ್. ತೇರದಾಳ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.