Belagavi News In Kannada | News Belgaum

ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ: ನೀರು ಮಿತವಾಗಿ ಬಳಸಲು ಸಾರ್ವಜನಿಕರಿಗೆ ಸೂಚನೆ

 

ಬೆಳಗಾವಿ, ಜೂ.17 : ಬೆಳಗಾವಿ ನಗರಕ್ಕೆ ಕುಡಿಯುವ ನೀರನ್ನು ಹಿಡಕಲ್ ಹಾಗೂ ರಕ್ಕಸಕೊಪ್ಪ ಜಲಾಶಯದಿಂದ ಸರಬರಾಜು ಮಾಡುತ್ತಿದ್ದು, ಮಳೆಯ ಅಭಾವದಿಂದ ಕಳೆದ ವರ್ಷಕ್ಕಿಂತ ಪ್ರಸ್ತುತ ವರ್ಷ ರಕ್ಕರಕೊಪ್ಪ ಜಲಾಶಯದಲ್ಲಿ ನೀರಿನ ಮಟ್ಟ ಗುಣನೀಯವಾಗಿ ಕಡಿಮೆಯಾಗುತ್ತಿರುವುದರಿಂದ ಸಾರ್ವಜನಿಕರು ಪ್ರತಿ ದಿನ ಬಳಸಲಾಗುತ್ತಿರುವ ನೀರಿನ ಬಳಕೆಯ ಪ್ರಮಾಣವನ್ನು ಮಿತವಾಗಿ ಬಳಸಬೇಕು ಹಾಗೂ ಪಂಪ್‍ಸೆಟ್‍ನ್ನು ಬಳಸಬಾರದು..

 

ಒಂದು ವೇಳೆ ಮುಂಬರುವ ದಿನಗಳಲ್ಲಿ ಮಳೆಯಾಗದೇ ಇದ್ದಲ್ಲಿ, ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವುದರಲ್ಲಿ ಪ್ರಸಕ್ತ ದಿನಗಳಿಗಿಂತ ಗಂಭೀರ ಪರಿಸ್ಥಿತಿ ಉಂಟಾಗಬಹುದು ಆದ್ದರಿಂದ ಸಾರ್ವಜನಿಕರು ಇಂತಹ ಅನಿವಾರ್ಯ ಸಮಯದಲ್ಲಿ ಸಾರ್ವಜನಿಕರು ಬೆಳಗಾವಿ ಮಹಾನಗರ ಪಾಲಿಕೆ, ಕೆ.ಯು.ಐ.ಡಿ.ಎಫ್.ಸಿ ಹಾಗೂ ನಿರ್ವಾಹಕರಾದ ಮೇ ಎಲ್ & ಟಿ ಯೊಂದಿಗೆ ಸಹಕರಿಸಬೇಕು ಎಂದು ಅಧೀಕ್ಷಕ ಅಭಿಯಂತರರು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ..