ರಾಷ್ಟ್ರೀಯ ಲೋಕ ಅದಾಲತ್ ಜುಲೈ.8 ರಂದು

ಬೆಳಗಾವಿ, ಜೂ.17 : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ವತಿಯಿಂದ ಜುಲೈ.8 2023 ರಂದು ರಾಷ್ಟ್ರೀಯ ಲೋಕ ಅದಾಲತ್‍ನ್ನು ಎಲ್ಲ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ..
ಸದರಿ ಲೋಕ ಅದಾಲತ್ ಸಲುವಾಗಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 1,18,073 ಪ್ರಕರಣಗಳಿದ್ದು, ಇದರಲ್ಲಿ ಸುಮಾರು 19,000 ಪ್ರಕರಣಗಳು ಲೋಕ ಅದಾಲತ್‍ನಲ್ಲಿ ರಾಜೀ ಸಲುವಾಗಿ ಗುರುತಿಸಲಾಗಿದೆ..
ಈ ಪೈಕಿ ಸುಮಾರು 14,000 ಪ್ರಕರಣಗಳು ರಾಜೀ ಆಗಬಹುದೆಂದು ಅಂದಾಜಿಸಲಾಗಿದೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.